ಯಾದಗಿರಿ | ಲುಂಬಿನಿ ವನದಲ್ಲಿ ದೆವ್ವದ ಸುಳ್ಳು ವದಂತಿ: ಅಪಪ್ರಚಾರಕರ ವಿರುದ್ಧ ಕಾನೂನು ಕ್ರಮಕ್ಕೆ ದಸಂಸ ಒತ್ತಾಯ

Date:

ನಗರದ ಲುಂಬಿನಿ ವನದಲ್ಲಿ ದೆವ್ವವಿದೆ ಎಂಬ ಸುಳ್ಳು ವದಂತಿಯನ್ನು ಹರಡಿ ಸಾರ್ವಜನಿಕರಲ್ಲಿ ಭಯ ಮೂಡಿಸಿರುವ ಕಿಡಿಗೇಡಿಗಳ ವಿರುದ್ಧ ತಕ್ಷಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟ ಒತ್ತಾಯಿಸಿ ಮನವಿ ಸಲ್ಲಿಸಿದರು.

“ಮೌಢ್ಯತೆ ಅಳಿಯಲ್ಲಿ ವೈಜ್ಞಾನಿಕತೆ ಬೆಳೆಯಲ್ಲಿ” ಎಂದು ಶೀರ್ಷಿಕೆಯಡಿ ಅಮಾವಾಸ್ಯೆದಿನದಂದು ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾನುವಾರ ಲುಂಬಿನಿ ಗಾರ್ಡನ್ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟದ ಅಧ್ಯಕ್ಷ ಶರಣು ಎಸ್. ನಾಟೇಕರ್ ಮಾತನಾಡಿ, ಕಳೆದ 17 ದಿನಗಳಿಂದ ಲುಂಬಿನಿ ಉದ್ಯಾನವನದಲ್ಲಿ ಭಯಾನಕ ಶಬ್ದಗಳು ಕೇಳಿಸುತ್ತಿವೆ ಹಾಗೂ ದೆವ್ವವಿದೆ ಎಂಬ ಸುಳ್ಳು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಎಂದು ಹೇಳಿದರು. ಕಿಡಿಗೇಡಿಗಳು ಕೃತಕ ವಿಡಿಯೋಗಳನ್ನು ಸೃಷ್ಟಿಸಿ ಪ್ರವಾಸಿಗರು ಹಾಗೂ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಜನರು ಇಂತಹ ಮೂಢನಂಬಿಕೆಗಳಿಗೆ ಮರುಳಾಗಬಾರದು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1201835

ಗೌರವಾಧ್ಯಕ್ಷ ಚಂದಪ್ಪ ಮುನಿಯಪ್ಪನೋರ್ ಮಾತನಾಡಿ, ಲುಂಬಿನಿ ವನದಲ್ಲಿ ದೆವ್ವ–ಭೂತಗಳಿವೆ ಎಂಬ ಅಪಪ್ರಚಾರ ಸಂಪೂರ್ಣ ಕಾಲ್ಪನಿಕವಾಗಿದ್ದು, ಇದು ತಥಾಗತ ಗೌತಮ ಬುದ್ಧರ ಜನ್ಮಸ್ಥಳವಾದ ಲುಂಬಿನಿ ವನದ ಹೆಸರಿಗೆ ಧಕ್ಕೆ ತರುವ ದುರುದ್ದೇಶದ ಕೃತ್ಯವಾಗಿದೆ ಎಂದು ಆರೋಪಿಸಿದರು.

ಒಕ್ಕೂಟದ ಅಧ್ಯಕ್ಷ ಕಾಶಿನಾಥ್ ನಾಟೇಕರ್ ಮಾತನಾಡಿ, ಉದ್ಯಾನವನದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಪೊಲೀಸ್ ಭದ್ರತೆ ನಿಯೋಜಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ಹರಿಬಿಟ್ಟವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಯುವಕನ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಎನ್. ದಾಸನಕೇರಿ ಮನವಿ ಪತ್ರವನ್ನು ಓದಿ ಸಲ್ಲಿಸಿದರು. ಡಾ. ಭಗವಂತ ಅನವಾರ, ಮರೆಪ್ಪ ಬುಕ್ಕಲ್, ಗುಂಡಪ್ಪ ಕಲಬುರಗಿ, ಸುರೇಶ್ ಬೊಮ್ಮುನ್, ದೇವೇಂದ್ರಪ್ಪ, ಆನಂದ್ ಮ್ಯಾಗೇರಿ, ಚಂದ್ರಕಾಂತ್ ಚಲುವಾದಿ, ರಾಹುಲ್ ಕೊಲ್ಲುರಕರ್, ಶರಣಪ್ಪ ಮಮ್ಮದರ್, ಗಿರೀಶ್ ಚಟ್ಟೇರಕರ್, ಮಹಾದೇವಪ್ಪ ಗುರುಸುಣಿಗಿ, ಧನರಾಜ್ ಕೋಲಿವಾಡ್, ಮೌನೇಶ್, ಪರಶುರಾಮ್ ಚಲುವಾದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...