ಯಾದಗಿರಿ | ಬ್ರಿಡ್ಜ್ ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತರ ಮನವಿ

Date:

ಹುರಸಗುಂಡಗಿ ಗ್ರಾಮದಿಂದ ದೋರನಹಳ್ಳಿ ಸಂಪರ್ಕ ರಸ್ತೆಯ ಮೇಲಿರುವ ಸೂರತ್, ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಬಿದರಾಣಿ, ಹುರಸಗುಂಡಗಿ ಮಧ್ಯದ ಸುರಂಗ ಮಾರ್ಗ (ಬ್ರಿಡ್ಜ್) ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತ ಮುಖಂಡರು ಶನಿವಾರ ಹೈವೇ ಇಂಚಾರ್ಜ್ ನಾಗರ್ಜುನ್ ಅವರಿಗೆ ಮನವಿ ಸಲ್ಲಿಸಿದರು

ಮನವಿ ಸಲ್ಲಿಸಿ ರೈತ ಮುಖಂಡರು ಮಾತನಾಡಿ ‘ಬ್ರಿಡ್ಜ್ ಎತ್ತರ ಕಡಿಮೆಯಿಂದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಸಾಗಿಸಲು ಸಾಧ್ಯವಾಗದೆ, ಕಳೆದ ಒಂದು ವರ್ಷದಿಂದ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಟ್ರ್ಯಾಕ್ಟರ್ ಹಾಗೂ ಸರಕು ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗಿದೆ’ ಎಂದು ತಿಳಿಸಿದರು.

‘ಮಳೆಗಾಲದಲ್ಲಿ ಸುರಂಗದ ಕೆಳಭಾಗದಲ್ಲಿ ನೀರು ನಿಲ್ಲುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದ್ದು, ಅಪಘಾತಗಳ ಭೀತಿ ಹೆಚ್ಚುತ್ತಿದೆ. ಒಳಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು’ ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಭೇಟಿ ನೀಡಿದ ಹೈವೇ ಇಂಚಾರ್ಜ್ ನಾಗರ್ಜುನ್ ಪರಿಶೀಲನೆ ನಡೆಸಿ, ಒಂದು ವಾರದೊಳಗೆ ಬಾಕಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಆಸ್ತಿ ವಿವಾದ, ಹಳೆಯ ವೈಷಮ್ಯ ಹಿನ್ನೆಲೆ ₹2.50 ಲಕ್ಷ ಸುಪಾರಿಗೆ ತಂದೆಯ ಕೊಲೆ; ಮಗ ಸೇರಿ ಐವರ ಬಂಧನ

ಈ ಸಂದರ್ಭದಲ್ಲಿ ರೈತ ಸಂಘಟನೆಯ ಸದಸ್ಯರಾದ ಮರೆಪ್ಪ, ತಾಯಪ್ಪ, ರವಿ (ಇಬ್ರಾಹಿಂಪುರ), ರಾಮಚಂದ್ರ (ಬಿದರಾಣಿ), ಸಕ್ರಪ್ಪ (ಮೇಲಾಗಿರಿ), ವೆಂಕಟೇಶ್, ಭಾಗರೆಡ್ಡಿ (ರಸ್ತಾಪುರ), ದೇವು, ತುಕ್ಕನರ ಸಾಬಣ್ಣ, ವಿಶ್ವ (ಮೇಲಾಗಿರಿ), ಶಿವು, ಸಿದ್ದು (ಅಲ್ಲೂರು), ಶೇಖರ, ವಿಶ್ವಪಂಡಿತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಯಾದಗಿರಿ | ಕ್ರೂಸರ್ ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್...