ಯಾದಗಿರಿ | ಸರ್ಕಾರಿ ಶಾಲೆಯ ಶಿಕ್ಷಕಿಯಿಂದ ಹಲ್ಲೆ ಆರೋಪ: ವಿದ್ಯಾರ್ಥಿಗೆ ಗಾಯ

Date:

ಯಾದಗಿರಿ ನಗರದ ಅಂಬೇಡ್ಕರ್ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೌನೇಶ ಎಂಬ ವಿದ್ಯಾರ್ಥಿ ಈ ಘಟನೆಯಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.

ಸೋಮವಾರ ವಿದ್ಯಾರ್ಥಿ ಮೌನೇಶ ಅನುಮತಿ ಪಡೆಯದೆ ಶಾಲೆಯ ಹೊರಗೆ ಹೋಗಿದ್ದಾನೆ. ಈ ವಿಚಾರವಾಗಿ ಪ್ರಶ್ನಿಸಿದ ಶಿಕ್ಷಕಿ ರೂಪಾ ಅವರು ಏಕಾಏಕಿ ಕೋಪಗೊಂಡು ವಿದ್ಯಾರ್ಥಿಯ ಕೈಗೆ ಬಲವಾಗಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಕಿಯ ಹೊಡೆತದ ತೀವ್ರತೆಗೆ ಬಾಲಕನ ಕೈ ಬಾತುಕೊಂಡಿದ್ದು (ಬಾವು), ರಾತ್ರಿಯಿಡೀ ತೀವ್ರ ನೋವಿನಿಂದ ಬಳಲಿದ್ದಾನೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿ, ಶಿಕ್ಷಕಿಯ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಮಗು ತಪ್ಪು ಮಾಡಿದ್ದರೆ ಬುದ್ಧಿವಾದ ಹೇಳಬೇಕಿತ್ತು ಅಥವಾ ಪೋಷಕರಿಗೆ ಮಾಹಿತಿ ನೀಡಬೇಕಿತ್ತು. ಆದರೆ ಕೈ ಬಾವು ಬರುವಂತೆ ಹೊಡೆಯುವುದು ಯಾವ ನ್ಯಾಯ?’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಶಾಲೆಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಸರ್ಕಾರಿ ಶಾಲೆಗಳಲ್ಲಿ ಇಂತಹ ಘಟನೆಗಳು ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ, ಹಲ್ಲೆ ನಡೆಸಿದ ಶಿಕ್ಷಕಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...