ಯಾದಗಿರಿ | ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಹುಣಸಗಿ ಬಂದ್‌; ಎಡಗೈ ಸಮುದಾಯದಿಂದ ತೀವ್ರ ಪ್ರತಿಭಟನೆ

Date:

ಪರಿಶಿಷ್ಟ ಜಾತಿ ಒಳಗಿನ ಮಾದಿಗ ಸಮುದಾಯಕ್ಕೆ ಸಂಪೂರ್ಣ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ನೇಮಕಾತಿಗಳಲ್ಲಿ ಒಳಮೀಸಲಾತಿ ಅನ್ವಯಿಸದೇ ಹುದ್ದೆಗಳನ್ನು ಭರ್ತಿ ಮಾಡುವ ಸರ್ಕಾರದ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಹುಣಸಗಿಯಲ್ಲಿ ಬಂದ್ ನಡೆಸಿ ಪ್ರತಿಭಟನೆ ಮಾಡಲಾಯಿತು.

ಕರ್ನಾಟಕ ಮಾದಿಗ ಒಳ ಮೀಸಲಾತಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಮತ್ತು ಸಮುದಾಯದ ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾದಗಿರಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರತಿಭಟನಾಕಾರರು, ‘ಒಳ ಮೀಸಲಾತಿ ವಿಧೇಯಕ ರಾಜ್ಯಪಾಲರ ಅನುಮೋದನೆ ಪಡೆದು ಕಾನೂನುಬದ್ಧವಾಗಿರುವ ಸಂದರ್ಭದಲ್ಲಿ ಸುಮಾರು 56 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಒಳ ಮೀಸಲಾತಿ ಅನ್ವಯಿಸದೇ ಭರ್ತಿ ಮಾಡುವ ಸಚಿವ ಸಂಪುಟದ ತೀರ್ಮಾನವು ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಚುನಾವಣೆಗೂ ಮುನ್ನ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಸರ್ಕಾರಕ್ಕೆ ಎರಡು ವರ್ಷಗಳಾದರೂ ಈ ಕುರಿತು ಪ್ರಾಮಾಣಿಕ ಕ್ರಮ ಕೈಗೊಳ್ಳಲಾಗಿಲ್ಲ’ ಎಂದು ಅವರು ದೂರಿದರು.

1585384

‘ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಹೋರಾಟದ ಒತ್ತಡಕ್ಕೆ ಮಣಿದು ಸಚಿವ ಸಂಪುಟವು ಒಳಮೀಸಲಾತಿ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿದ್ದು, 2025ರ ಆಗಸ್ಟ್‌ 25ರಂದು ಆದೇಶ ಹೊರಡಿಸಲಾಗಿತ್ತು. ಬಳಿಕ ಚಳಿಗಾಲದ ಅಧಿವೇಶನದಲ್ಲಿ ಅದನ್ನು ಕಾಯ್ದೆಯಾಗಿ ಅಂಗೀಕರಿಸಿ ರಾಜ್ಯಪಾಲರಿಂದ ಅಂತಿಮ ಅನುಮೋದನೆ ಪಡೆಯಲಾಗಿದೆ. ಇಷ್ಟೆಲ್ಲ ಪ್ರಕ್ರಿಯೆಗಳು ನಡೆದಿದ್ದರೂ ನೇಮಕಾತಿಗಳನ್ನು ಒಳಮೀಸಲಾತಿ ಅನ್ವಯಿಸದೇ ಭರ್ತಿ ಮಾಡಲು ಮುಂದಾಗಿರುವುದು ದಲಿತ ಸಮುದಾಯದ ವಿರುದ್ಧದ ನೀತಿಯಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

‘ಮಾರ್ಚ್‌ 27ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿಗೆ ತರಬೇಕು. ಇಲ್ಲವಾದಲ್ಲಿ ರಾಜ್ಯಮಟ್ಟದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ನಿರಾಶೆ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಕ್ರೋಶ

ಈ ಸಂದರ್ಭದಲ್ಲಿ ಬಸವರಾಜ ದೊಡ್ಡಮನಿ ಮಲ್ಲು ಮಾಸ್ತರ್, ಪವಡೆಪ್ಪ ಕಕ್ಕೇರಾ, ಕಾಶಿನಾಥ ಎಸ್ ಹಾದಿಮನಿ, ಬಸವರಾಜ ಎಸ್’ ಕಟ್ಟಿಮನಿ, ನಂದಪ್ಪ ಪೀರಾಪೂರ, ಅಂಬ್ಲಿಪ್ಪ ಹಳ್ಳಿ, ನಂದುಕುಮಾರ್ ಪಿ ಕನಳ್ಳಿ, ಮಲ್ಲಣ್ಣ ದೊಡ್ಡಮನಿ, ಭೀಮು ಮ್ಯಾಗೇರಿ ಕಕ್ಕೇರಾ, ತಿಮ್ಮಣ್ಣ ವಜ್ಜಲ್, ಮಾನಪ್ಪ ಯಡಹಳ್ಳಿ, ತಾಯಪ್ಪ ಕನ್ನಳ್ಳಿ, ಭೀಮಣ್ಣ ಬಲಶೆಟ್ಟಿಹಾಳ, ಹಣಮಂತ ಕಟ್ಟಿಮನಿ, ದಾನಪ್ಪ ಲಕ್ಷ್ಮೀಪುರ, ಹಣಮಂತ, ಎಂ ಬಿ ದೊಡ್ಡಮನಿ, ಬಸವರಾಜ ಹಗರಟಗಿ, ಶಿವಪ್ಪ ಸದಬ ಸೇರಿದಂತೆ ಇನ್ನಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...