ಯಾದಗಿರಿ | ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರಕುವಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ; ಸಿದ್ದಾರೂಡ ಬನ್ನಿಕೊಪ್ಪ

Date:

ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರಕುವಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ ದಂಡಾಧಿಕಾರಿ ಎಂದು ಸಿದ್ದಾರೂಡ ಬನ್ನಿಕೊಪ್ಪ ಹೇಳಿದರು.

ಶಾಹಪುರ್ ತಾಲೂಕು ವ್ಯಾಪ್ತಿಯ ದಿಗ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ಶನಿವಾರ ಶಾಲಾ ಮಕ್ಕಳಿಗೆ ಹಾಗೂ ಶಾಲೆಗೆ ಅಗತ್ಯವಿರುವ ಮೂಲಸೌಕರ್ಯ ಶೌಚಾಲಯದ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ‘ವಿದ್ಯಾರ್ಥಿಗಳು ಸರ್ಕಾರ ಹಾಗೂ ಸರಕಾರೇತರ ಸಂಘ ಸಂಸ್ಥೆಗಳು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರಕುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೆ ವೇಳೆ ಇಒ ಬಸವರಾಜ ಶರಭೈ ಮಾತನಾಡಿ, ‘ವಲ್ಡ್ ವಿಷನ್ ಇಂಡಿಯಾ ಸಂಸ್ಥೆ ಮಕ್ಕಳ ಶಿಕ್ಷಣಾಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪುಸ್ತಕ ಸಂಗ್ರಹಾಲಯ ಸ್ಥಾಪನೆಗಾಗಿ ಎರಡು ಅಲಮಾರಿಗಳು ಹಾಗೂ ₹30 ಸಾವಿರ ಮೌಲ್ಯದ ಪುಸ್ತಕಗಳನ್ನು ನೀಡಿರುವುದು ಶ್ಲಾಘನೀಯ ಕಾರ್ಯ’ ಎಂದು ತಿಳಿಸಿದರು.

‘ಸಂಸ್ಥೆಯ ವ್ಯವಸ್ಥಾಪಕರಾದ ಅನಿಲ್ ತೇಜಪ್ಪ ಬಲ್ಲೂರಕರ ಸಂಸ್ಥೆಯ ಕಾರ್ಯಚಟುವಟಿಕೆಗಳು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ’ ನೀಡಿದರು.

ಈ ಸಂದರ್ಭದಲ್ಲಿ ಶಾಲೆಗೆ ಪುಸ್ತಕ ಸಂಗ್ರಹಾಲಯ ಸ್ಥಾಪನೆಗಾಗಿ ಎರಡು ಅಲಮಾರಿಗಳು, ₹30 ಸಾವಿರ ಮೌಲ್ಯದ ಪುಸ್ತಕಗಳು, ತಿಪ್ಪನಹಳ್ಳಿ ಮತ್ತು ಬೆನಕನಹಳ್ಳಿ ಹೈಸ್ಕೂಲ್ ಶಾಲೆಯ 28 ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಅನುಕೂಲವಾಗಲಿ ಎಂದು ಸೈಕಲ್‌ಗಳನ್ನು ವಿತರಿಸಲಾಯಿತು. ಜೊತೆಗೆ ಶುದ್ಧ ಕುಡಿಯುವ ನೀರಿಗಾಗಿ ಆರ್.ಒ. ಘಟಕ ಹಾಗೂ ವೈಯಕ್ತಿಕ ಶೌಚಾಲಯ ಸೌಲಭ್ಯಗಳನ್ನು ಉದ್ಘಾಟಿಸಲಾಯಿತು. ಪರಿಹಾರ ಬೋಧನಾ ಕೇಂದ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯ ಸೋಮಪುರ್ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ದೋರನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ:‌ ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಕಾರ್ಯಕ್ರಮದಲ್ಲಿ ಎಸಿಡಿಪಿಒ ಸಿದ್ದಣ್ಣಗೌಡ ಬಿರಾದರ್, ಹಾಲಬಾವಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಗುರು ಶ್ರೀಮತಿ ಚಂದ್ರಕಲಾ ಗೂಗಲ್, ದಿಗ್ಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಶ್ರೀಮತಿ ಜಯಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮಾರ್ಟಿನ್ ಶಾಂತಕುಮಾರ್ ನಿರೂಪಿಸಿ, ಮೋಹನ್ ಕುಮಾರ್ ಹೊಸಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...