ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ ಜಮೀನಿನಲ್ಲಿ ಭಾನುವಾರ ಮಧ್ಯರಾತ್ರಿ ಚಿರತೆ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿ, ಎರಡು ತಿಂಗಳ ಕರುವಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ.
ಮುರಘೇಂದ್ರ ತಂ ನರಸಪ್ಪ ಅಲ್ಲೂರ ಅವರ ಸರ್ವೆ ನಂ.224ರ ಜಮೀನಿನ ಶೆಡ್‌ನಲ್ಲಿ ಕಟ್ಟಿದ್ದ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಹಸು ಸಾವನ್ನಪ್ಪಿದ್ದು, ಕರು ಗಾಯಗೊಂಡಿದೆ.
ಮಾಹಿತಿ ತಿಳಿದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುನ್ನಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅರಣ್ಯ ಹಾಗೂ ಪಶುಪಾಲನಾ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪಂಚನಾಮೆ ನಡೆಸಿ ಗಾಯಗೊಂಡ ಕರುವಿಗೆ ಚಿಕಿತ್ಸೆ ನೀಡಲಾಯಿತು.
ಇದನ್ನು ಓದಿದ್ದೀರಾ? ಯಾದಗಿರಿ | ಏ.15ರವರೆಗೆ ಕಾಲುವೆಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
ಜಿಲ್ಲೆಯಲ್ಲಿ ಇತ್ತೀಚೆಗೆ ಹಲವು ಗ್ರಾಮಗಳಲ್ಲಿ ಚಿರತೆ ದಾಳಿಗಳು ನಡೆಯುತ್ತಿರುವ ಹಿನ್ನೆಲೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿಯಲು ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಹಸುವಿನ ಮಾಲೀಕರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.





