ಯಾದಗಿರಿ | ದಸಂಸ ವತಿಯಿಂದ “ಮನುಸ್ಮೃತಿ ದಹನ”

Date:

ಸಾಮಾಜಿಕ ಸಮಾನತೆ, ಮಾನವ ಗೌರವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಆಗ್ರಹಿಸಿ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿ ದಹನ ಕಾರ್ಯಕ್ರಮದೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

1927ರಲ್ಲಿ ಮಹಾರಾಷ್ಟ್ರದ ಮಹಾಡದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಮನುಸ್ಮೃತಿ ದಹನದ ಸ್ಮರಣಾರ್ಥವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಾತಿ ಹಾಗೂ ಲಿಂಗ ಆಧಾರಿತ ತಾರತಮ್ಯವನ್ನು ಪೋಷಿಸುವ ಮನುವಾದಿ ಚಿಂತನೆಗಳ ವಿರುದ್ಧ ಸಂಘಟಿತ ಹೋರಾಟದ ಸಂಕೇತವಾಗಿ ಮನುಸ್ಮೃತಿಯನ್ನು ದಹಿಸಲಾಯಿತು.

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್, ‘ಮನುಸ್ಮೃತಿ ಎಂಬುದು ಸಾವಿರಾರು ವರ್ಷಗಳಿಂದ ಸಮಾಜದಲ್ಲಿ ಜಾತಿ ಭೇದ, ಅಸ್ಪೃಶ್ಯತೆ ಹಾಗೂ ಮಹಿಳಾ ದಮನಕ್ಕೆ ಶಾಸ್ತ್ರೀಯ ಬೆಂಬಲ ನೀಡಿದ ಅಲಿಖಿತ ಸಂವಿಧಾನವಾಗಿದ್ದು, ಅದನ್ನು ದಹನಗೊಳಿಸುವ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಸಮಾಜದ ಮುಂದೆ ಪ್ರತಿಪಾದಿಸಿದ್ದರು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಇಂದು ನಾವು ಕೇವಲ ಒಂದು ಗ್ರಂಥವನ್ನಲ್ಲ, ನಮ್ಮೊಳಗೆ ಇನ್ನೂ ಉಳಿದಿರಬಹುದಾದ ಮನುಸ್ಮೃತಿಯ ಮನೋಭಾವನೆ, ಅಸಮಾನತೆಯ ಚಿಂತನೆ ಹಾಗೂ ಜಾತಿವಾದಿ ಪಳೆಯುಳಿಕೆಗಳನ್ನು ಸಂಪೂರ್ಣವಾಗಿ ಸುಟ್ಟು ಹಾಕಬೇಕಿದೆ. ಆ ಅಲಿಖಿತ ಸಂವಿಧಾನ ನಾಶವಾಗದೆ ಬಾಬಾಸಾಹೇಬ್ ಅವರು ರೂಪಿಸಿ ದೇಶಕ್ಕೆ ನೀಡಿರುವ ಲಿಖಿತ ಸಂವಿಧಾನದ ಸಂಪೂರ್ಣ ಅನುಷ್ಠಾನ ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

907036

‘ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಬೇಕು. ಸಂವಿಧಾನದಲ್ಲಿ ಅಡಕವಾಗಿರುವ ಸಮಾನತೆ, ಸಾಮಾಜಿಕ ನ್ಯಾಯ, ಮಾನವ ಗೌರವ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಜಾರಿಗೊಳಿಸುವ ಹೊಣೆಗಾರಿಕೆ ಸರ್ಕಾರಕ್ಕೂ ಸಮಾಜಕ್ಕೂ ಇದೆ. ಸಂವಿಧಾನ ವಿರೋಧಿ ಮನುವಾದಿ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಯಲಿದೆ’ ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮನುಸ್ಮೃತಿ ದಹನದಿಂದಲೆ ಸಮಸ್ಥರ ಉನ್ನತಿ ; ಕರಾದಸಂಸ ಬೃಹತ್ ಪ್ರತಿಭಟನೆ

ಪ್ರತಿಭಟನೆಯಲ್ಲಿ ಗೋಪಾಲ ತೆಳಗೇರಿ, ಭೀಮರಾಯ ಲಿಂಗೇರಿ, ಭೀಮರಾಯ ಠಾಣಗುಂದಿ, ಸೈದಪ್ಪ ಕೂಯಿಲೂರ, ಭೀಮರಾಯ ಹೊಸ್ಮನಿ, ಬಾಸುಮೀಯಾ ವಡಿಗೇರಾ, ಚಂದ್ರಕಾಂತ ಗೀರೆಪ್ಪನೋರ್, ನಿಂಗಪ್ಪ ಕೊಲ್ಲೂರಕರ್, ಪರಶುರಾಮ ಒಡೆಯರ್, ಗೌತಮ ಕ್ರಾಂತಿ, ಮಲ್ಲಿಕಾರ್ಜುನ ಹತ್ತಿಕುಣಿ, ಸಂಪತ್ ಚಿನ್ನಾಕರ್, ವಸಂತ ಸುಂಗಲಕರ್, ಹಣಮಂತ ಮೀಲ್ಮೀ ಸೇರಿದಂತೆ ಅನೇಕ ದಲಿತ ಮುಖಂಡರು, ಹೋರಾಟಗಾರರು ಹಾಗೂ ಕಾರ್ಯಕರ್ತರು ಭಾಗವಹಿಸಿ ಮನುವಾದದ ವಿರುದ್ಧ ಘೋಷಣೆಗಳನ್ನು ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...