ಯಾದಗಿರಿ | 6 ಕೋಟಿ ರೂ. ಕಾಮಗಾರಿಗಳಿಗೆ ಅಡಿಗಲ್ಲು ಪೂಜೆ ನೆರವೇರಿಸಿದ ಸಚಿವ ಶರಣಬಸಪ್ಪ ದರ್ಶನಾಪೂರ

Date:

ಕೆಂಭಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಮತ್ತು ವಿದ್ಯುದೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಅಡಿಗಲ್ಲು ಪೂಜೆ ನೆರವೇರಿಸಿದರು.

ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು ನುಡಿದಂತೆ ನಡೆದುಕೊಳ್ಳುತ್ತಿದೆ ಎಂದು ಹೇಳಿದರು. ನಮ್ಮ ಸರ್ಕಾರ ಇರುವವರೆಗೆ ಗ್ಯಾರಂಟಿ ಯೋಜನೆಗಳು ನಿರಂತರವಾಗಿ ಮುಂದುವರಿಯುತ್ತವೆ. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಕ್ಕಿ ಪೂರೈಕೆಯಲ್ಲಿ ಸಹಕಾರ ಸಿಗದಿದ್ದರೂ, ರಾಜ್ಯ ಸರ್ಕಾರ ಡಿಬಿಟಿ ಮೂಲಕ ಹಣ ಜಮಾ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳು ಜಾತಿ-ಭೇದವಿಲ್ಲದೆ ಎಲ್ಲ ವರ್ಗದ ಜನರಿಗೆ ತಲುಪುತ್ತಿವೆ,’ ಎಂದು ತಿಳಿಸಿದರು.

‘ಇಂದಿರಾ ಕಿಟ್ ಯೋಜನೆ ಕುರಿತು ಮಾತನಾಡಿದ ಅವರು, ಅಕ್ಕಿಯ ಬದಲಾಗಿ ಬೇಳೆ, ಸಕ್ಕರೆ, ಉಪ್ಪು ಮತ್ತು ಎಣ್ಣೆ ಒಳಗೊಂಡ ಕಿಟ್ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದ್ದು, ಶೀಘ್ರದಲ್ಲೇ ಜಾರಿಗೆ ತರಲಾಗುವುದು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1406917

‘ಕೆಂಭಾವಿ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 48 ಕೋಟಿ ರೂ. ವೆಚ್ಚದಲ್ಲಿ ಮೂರು ಓವರ್‌ಹೆಡ್ ಟ್ಯಾಂಕ್‌ಗಳು ಹಾಗೂ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. 4,050 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ. ಇನ್ನೂ ಕ್ರಾಸ್‌ನಿಂದ ಕೆಂಭಾವಿ ರಸ್ತೆ ಕಾಮಗಾರಿಗೆ 5 ಕೋಟಿ ರೂ. ಮತ್ತು 7 ಕೋಟಿ ರೂ. ವೆಚ್ಚದ ಕೆಲಸಗಳು ಪ್ರಗತಿಯಲ್ಲಿದ್ದು, ಕೆಂಭಾವಿಯಿಂದ ತಿಪನಟಗಿ ಕ್ರಾಸ್ ವರೆಗೆ 8 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿದೆ’ ಎಂದು ಸಚಿವರು ವಿವರಿಸಿದರು.

‘ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಆಗ ಮಾತ್ರ ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರುತ್ತದೆ,’ ಎಂದು ಸೂಚಿಸಿದರು. ಮಂದಿರ, ಮಸೀದಿ ಹಾಗೂ ಸಮುದಾಯ ಭವನಗಳ ಅಭಿವೃದ್ಧಿಗೆ ಶಕ್ತಿಮೀರಿ ಅನುದಾನ ತರಲಾಗಿದೆ ಎಂದರು.

ಇದನ್ನು ಓದಿದ್ದೀರಾ? ಕಲಬುರಗಿ | ಬೈಕ್, ಟ್ರಾಕ್ಟರ್ ಅಪಘಾತ; ಪ್ರಾಣಾಪಾಯದಿಂದ ಪಾರಾದ ಯುವಕರು

ಈ ಸಂದರ್ಭದಲ್ಲಿ ಬಸನಗೌಡ ಹೊಸಮನಿ, ಶಿವಮಾಂತ ಚಂದಾಪೂರ, ಸಿದ್ದನಗೌಡ ಪಾಟೀಲ್, ಬಾಪುಗೌಡ ಪಾಟೀಲ್, ವಾಮನರಾವ್ ದೇಶಪಾಂಡೆ, ಖಾಜಾಪಟೇಲ್ ಕಾಚೂರ, ಪುರಸಭೆ ಅಧ್ಯಕ್ಷೆ ಪ್ರೀಯಾ ರಾಮನಗೌಡ ಪಾಟೀಲ್, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ ಸೇರಿದಂತೆ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...