ಯಾದಗಿರಿ | ಜೀವ ಬೆದರಿಕೆ ಹಾಕಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

Date:

ಹದಿನೇಳೂವರೆ ವರ್ಷದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ ಹಾಕಿ ಬಲವಂತವಾಗಿ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಪೋಟ್ರೊ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸುರಪುರ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ನಬಿಸಾಬ್ ಖಾಸಿಂಸಾಬ್ ಆರೋಪಿಯಾಗಿದ್ದಾನೆ. ಪೀಡಿತ ಬಾಲಕಿ ನಾಲ್ಕನೇ ತರಗತಿ ಓದಿ ಮನೆಯಲ್ಲೇ ಇದ್ದು, ಹೊಲಕ್ಕೆ ತೆರಳುತ್ತಿದ್ದ ವೇಳೆ ಆರೋಪಿ ಪರಿಚಯ ಮಾಡಿಕೊಂಡು ಸಲುಗೆಯಿಂದ ಮಾತನಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರ ಕಿರುಕುಳ ನೀಡುತ್ತಿದ್ದನು. ಮದುವೆ ಮಾಡಿಕೊಳ್ಳುವುದಾಗಿ ಹೇಳಿ ತನ್ನೊಂದಿಗೆ ಬರುವಂತೆ ದುಂಬಾಲು ಬಿದ್ದಿದ್ದಾನೆ. ಈ ವಿಚಾರವನ್ನು ಪೋಷಕರಿಗೆ ತಿಳಿಸುವುದಾಗಿ ಬಾಲಕಿ ಎಚ್ಚರಿಸಿದರೂ, ಆರೋಪಿ ಜೀವ ಬೆದರಿಕೆ ಹಾಕುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ದಿನ ಬಯಲು ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿ, ಕಲಬುರಗಿ ನಗರದ ಲಾಡ್ಜ್ ಒಂದರಲ್ಲಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ನಂತರ ಕುರಕುಂದಿ ಗ್ರಾಮದ ಸಂಬಂಧಿಕರ ಮನೆಗೆ ಕರೆದೊಯ್ದು, ಸ್ನೇಹಿತೆ ಎಂದು ಹೇಳಿ ಬಾಲಕಿಯನ್ನು ಅಲ್ಲೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ.

ಇದನ್ನು ಓದಿದ್ದೀರಾ? ಕಲಬುರಗಿ | ವಿದ್ಯಾರ್ಥಿಗಳೇ ಸಮಾಜದ ಭವಿಷ್ಯ, ಶೈಕ್ಷಣಿಕ ಸಾಧನೆ ದೇಶಕ್ಕೆ ದೊಡ್ಡ ಕೊಡುಗೆ: ಡಾ. ಅನೀಲ್ ಟೆಂಗಳಿ

ಬಾಲಕಿ ಎರಡು ದಿನಗಳ ಬಳಿಕ ಸ್ವಗ್ರಾಮಕ್ಕೆ ಮರಳಿದಾಗ ನಡೆದ ಘಟನೆ ಪೋಷಕರಿಗೆ ತಿಳಿದುಬಂದಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...