ಯಾದಗಿರಿ | ವಿಚಾರಣೆಯ ನೆಪದಲ್ಲಿ ರಕ್ತ ಕ್ಯಾನ್ಸರ್ ಪೀಡಿತನ ಮೇಲೆ ಪೊಲೀಸರ ಹಲ್ಲೆ ಆರೋಪ

Date:

ವಿಚಾರಣೆಯ ನೆಪದಲ್ಲಿ ರಕ್ತ ಕ್ಯಾನ್ಸರ್ ಪೀಡಿತ ಮೆಹಬೂಬ್ ಅಲಿ ಮೇಲೆ ಪೊಲೀಸರು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳಕಿಗೆ ಬಂದಿದೆ.

ಸುರಪುರ ತಾಲೂಕಿನ ಕೆಂಭಾವಿ ನಿವಾಸಿಯಾದ ಅವರನ್ನು ಮಂಗಳವಾರ ವಿಚಾರಣೆಗೆಂದು ಕರೆಸಿ ಹುಣಸಗಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಮೆಹಬೂಬ್ ಅಲಿ ಅವರನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ನಾಲ್ಕು ದಿನ ಚಿಕಿತ್ಸೆ ನೀಡಲಾಗಿದೆ.

ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಹಬೂಬ್ ಅಲಿ ಹಾಗೂ ಉತ್ತರ ಪ್ರದೇಶ ಮೂಲದ ಸಾಹಿಲ್ ಎಂಬ ಯುವಕ ಜಾತ್ರೆಗಳಲ್ಲಿ ಆಟಿಕೆ ಮಾರಾಟ ಮಾಡುತ್ತಿದ್ದರು. ಈ ವೇಳೆ ಟಂಟಂ ವಾಹನದಿಂದ ಬಿದ್ದು ಸಾಹಿಲ್ ಸಾವನ್ನಪ್ಪಿದ್ದ. ಐದು ತಿಂಗಳ ಹಳೆಯ ಈ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು ಮೆಹಬೂಬ್ ಅಲಿ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಸುರಪುರ ಮಾಜಿ ಶಾಸಕ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

ಈ ಪ್ರಕರಣದ ಕುರಿತು ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ. ಸುರಪುರ ಡಿಎಸ್ಪಿ ಜಾವೀದ್ ಇನಾಂದಾರ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ವರದಿ ಬಂದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...