ಯಾದಗಿರಿ | ಏ.15ರವರೆಗೆ ಕಾಲುವೆಗೆ ನಿರಂತರ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

Date:

ಕಾಲುವೆಗೆ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸಿ ಬಂದ್ ಮಾಡುವ ನಿರ್ಧಾರವನ್ನು ಕೈಬಿಟ್ಟು, ಏಪ್ರಿಲ್ 15ರವರೆಗೆ ನಿರಂತರವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಆಗ್ರಹಿಸಿದೆ.

ಈ ಕುರಿತು ಸೋಮವಾರ ಬೆಳಿಗ್ಗೆ ಸುರಪುರ ತಾಲೂಕಿನ ದೇವಪುರ ಕ್ರಾಸ್‌ನಲ್ಲಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ, ನಾರಾಯಣಪುರ ಕೃಭಾಜನಿನಿ ಮುಖ್ಯ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ಪ್ರತಿಭಟನಾಕಾರರು ಮಾತನಾಡಿ, ‘ರೈತರು ನೀರಾವರಿಯನ್ನು ಅವಲಂಬಿಸಿ ಶೇಂಗಾ, ಸಜ್ಜೆ, ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದು, ಈ ಬೆಳೆಗಳು ಈಗ ಕಾಳು ಕಟ್ಟುವ ಹಂತದಲ್ಲಿವೆ. ಏಪ್ರಿಲ್ 15ರವರೆಗೆ ನಿರಂತರವಾಗಿ ಕಾಲುವೆಗೆ ನೀರು ಹರಿಸಿದರೆ ಮಾತ್ರ ರೈತರ ಬೆಳೆ ಕೈಗೆ ಸಿಗಲಿದೆ. ಇಲ್ಲವಾದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆ’ ಎಂದು ರೈತರು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬೇಸಿಗೆ ಬೆಳೆಗಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿ ನಡೆಸಿದ ಸಲಹಾ ಸಮಿತಿಯ ಸಭೆಯಲ್ಲಿ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸುವ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕ’ ಎಂದು ಸಂಘಟನೆ ಆರೋಪಿಸಿದೆ.

‘ಕಳೆದ ಎರಡು, ಮೂರು ವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜ, ಗೊಬ್ಬರ, ಕೀಟನಾಶಕ ಮತ್ತು ಕೂಲಿ ವೆಚ್ಚಗಳು ಹೆಚ್ಚಾಗಿರುವ ಸಂದರ್ಭದಲ್ಲಿ ಇಂತಹ ನಿರ್ಧಾರ ರೈತರಿಗೆ ಮತ್ತಷ್ಟು ಸಂಕಷ್ಟ ಉಂಟುಮಾಡಲಿದೆ’ ಎಂದು ಹೇಳಿದರು.

‘ಆದ್ದರಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ರೈತರ ಬೇಡಿಕೆಗೆ ಸ್ಪಂದಿಸಿ ಏಪ್ರಿಲ್ 15ರವರೆಗೆ ಕಾಲುವೆಗೆ ನಿರಂತರವಾಗಿ ನೀರು ಹರಿಸುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡುವ ಮೂಲಕ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಈ ಸಂದರ್ಭದಲ್ಲಿ ವೆಂಕಟೇಶಗೌಡ ಕುಪಗಲ್, ಹಣಮಂತ್ರಾಯ ಚಂದಲಾಪೂರ, ಅಯ್ಯಣ್ಣ ಹಾಲಭಾವಿ, ಮಹಾದೇವಮ್ಮ ಬೇವಿನಾಳಮಠ, ಮರಿಯಪ್ಪ ಮಾಸ್ಟರ ಹೇಮನೂರು, ತಿಪ್ಪಣ್ಣ ಜಂಪಾ, ತಿರುಪತಿ ಕುಪಗಲ್, ಹನುಮಗೌಡ ನಾರಾಯಣಪೂರ, ಅವಿನಾಶ ಕೊಡೇಕಲ್, ಮಲ್ಲಣ್ಣ ಹಾಲಭಾವಿ, ಸಾಹೇಬಗೌಡ ಮದಲಿಂಗನಾಳ, ಗದ್ದೆಪ್ಪ ನಾಗಬೇವಿನಾಳ, ಭೀಮಣ್ಣ ತಿಪ್ಪನಟಗಿ, ನಾಗಪ್ಪ ಕುಪಗಲ್, ಭೀಮನಗೌಡ ಕರ್ನಾಳ, ರಾಗು ಕುಪ್ಪಗಲ್, ಶಿವನಗೌಡ ರುಕ್ಕಾಪೂರ, ಪ್ರಭು ದೊರಿ, ದೇವಿಂದ್ರಪ್ಪ ತಿಪ್ಪನಟಗಿ, ರೋನರೀಸ್ ರೋಸ್ಟ್, ತಿಪ್ಪಣ್ಣ ತಳವಾರ, ಭೀಮರಾಯ ಒಕ್ಕಲಿಗ, ಯಂಕೋಬ ದೊರೆ ಕುಪಗಲ್, ಲೋಹಿತ್ ಕುಮಾರ, ಭೀಮನಗೌಡ ಸೂಗೂರು, ಮಾನಪ್ಪ ಕೊಂಬಿನ್, ಹಣಮಂತ ಕುಂಬಾರಪೇಟೆ, ಶಿವಲಿಂಗಪ್ಪ ಕುಂಬಾರಪೇಟೆ, ಚಂದ್ರಶೇಖರ ಗುಳಬಾಳ, ಕಾಮರಾಯ ಮದಲಿಂಗನಾಳ, ಶಂಕ್ರಪ್ಪ ಗುಳಬಾಳ, ಮಲ್ಲಣ್ಣ ಗುಳಬಾಳ, ಹೆಚ್ ಆರ್ ಬಡಿಗೇರ, ದೇವಪ್ಪ ಯರಕಿಹಾಳ, ದೇವಿಂದ್ರಪ್ಪ ಬಳಿಚಕ್ರ, ಸಂಜೀವ ಗುಳಬಾಳ, ಶ್ರವಣಕುಮಾರ ಡೊಣ್ಣಿಗೇರಿ, ಹಣಮಂತ್ರಾಯಗೌಡ ಕರ್ನಾಳ ಇನ್ನಿತರರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಯಾದಗಿರಿ | ಕ್ರೂಸರ್ ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್...