ಯಾದಗಿರಿ | ಸಾವೂರ ಗ್ರಾಮಕ್ಕೆ ಹೊಸ ಶಾಲಾ ಕಟ್ಟಡ ಮಂಜೂರು ಮಾಡುವಂತೆ ಮನವಿ

Date:

ಸಾವೂರ ಗ್ರಾಮಕ್ಕೆ ಹೊಸ ಶಾಲಾ ಕಟ್ಟಡ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪದವೀಧರರ ವಿಭಾದ ಜಿಲ್ಲಾ ಉಪಾಧ್ಯಕ್ಷ ನೇತೃತ್ವದಲ್ಲಿ ಸೋಮವಾರ ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನರೆಡ್ಡಿ ತುನ್ನೂರು ರವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಜಿಲ್ಲಾ ಉಪಾಧ್ಯಕ್ಷ ಮರಲಿಂಗ ಸಾವೂರ್ ಮಾತನಾಡಿ, ‘ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾವೂರ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಸ್ತುತ ಕಟ್ಟಡವು ಸಂಪೂರ್ಣವಾಗಿ ಜೀರ್ಣಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ವಿದ್ಯಾಭ್ಯಾಸಕ್ಕೆ ಅಡಚಣೆ ಉಂಟಾಗಿದ್ದು, ಮಳೆಗಾಲದಲ್ಲಿ ಶಾಲಾ ಕಟ್ಟಡ ಶಿಥಿಲಗೊಂಡು ತರಗತಿ ಕೊಠಡಿಗಳಲ್ಲಿ ನೀರು ಸೋರುತ್ತವೆ ಅದಲ್ಲದೇ ತರಗತಿ ತಕ್ಕಂತೆ ಕೊಠಡಿಗಳಿಲ್ಲ. ಶೌಚಾಲಯ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.

ಮುಂದುವರೆದು ಅವರು ‘ಸಾವೂರ ಗ್ರಾಮವು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಂದ ಕೂಡಿದ್ದು, ಇಲ್ಲಿನ ಮಕ್ಕಳಿಗೆ ಸರ್ಕಾರಿ ಶಾಲೆಯೇ ಶಿಕ್ಷಣದ ಏಕೈಕ ಆಶ್ರಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಶಾಲೆಗೆ ನೂತನ ಹಾಗೂ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಆದರಿಂದ ಹೊಸ ಕಟ್ಟಡ ನಿರ್ಮಾಣವಾದಲ್ಲಿ ಮಕ್ಕಳಿಗೆ ಸುರಕ್ಷಿತ ಮತ್ತು ಅನುಕೂಲಕರ ವಾತಾವರಣದಲ್ಲಿ ಶಿಕ್ಷಣ ಪಡೆಯುವ ಅವಕಾಶ ಲಭ್ಯವಾಗುವುದರ ಜೊತೆಗೆ, ಶಾಲಾ ದಾಖಲಾತಿಗಳ ಸಂಖ್ಯೆಯೂ ಹೆಚ್ಚಾಗುತ್ತದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಸಂಗೀತ ಕಲಾವಿದರ ಸಂಭ್ರಮ

ಆದ್ದರಿಂದ, ಸಂಬಂಧಿಸಿದ ಇಲಾಖೆಯವರು ಅಥವಾ ಜನಪ್ರತಿನಿಧಿಗಳು ತಮ್ಮ ಅನುದಾನ ಅಥವಾ ಸರ್ಕಾರದ ಸಂಬಂಧಿಸಿದ ಯೋಜನೆಗಳ ಮೂಲಕ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸಾವೂರ ಗ್ರಾಮಕ್ಕೆ ನೂತನ ಶಾಲಾ ಕಟ್ಟಡವನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...