ಯಾದಗಿರಿ | ಸ್ಮಾರ್ಟ್ ಕಾರ್ಡ್ ವಿಳಂಬ: ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆ ಆಕ್ರೋಶ

Date:

ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಾವಿರಾರು ಬಡ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿರುವ ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆಯ ಕಾರ್ಮಿಕ ಘಟಕ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ‘ಸ್ಮಾರ್ಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದಿದ್ದರೂ ಕೆಂಭಾವಿ ಭಾಗದ ಕಾರ್ಮಿಕರಿಗೆ ಕಾರ್ಡ್ ವಿತರಣೆ ಮಾಡಲಾಗಿಲ್ಲ. ಇದರ ಪರಿಣಾಮವಾಗಿ ಬಡ ಕಾರ್ಮಿಕರು ಸರ್ಕಾರದ ವಿವಿಧ ಕಾರ್ಮಿಕ ಕಲ್ಯಾಣ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಹೋಬಳಿ ಮಟ್ಟದ ಕಾರ್ಮಿಕರು ಮಾಹಿತಿ ಪಡೆಯಲು ಕಚೇರಿಗಳಿಗೆ ತೆರಳಿದಾಗ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟಕ್ಕೆ ಹೋಗುವಂತೆ ಸೂಚಿಸುತ್ತಿರುವುದು ಕಾರ್ಮಿಕರಿಗೆ ಹೆಚ್ಚುವರಿ ತೊಂದರೆ ಉಂಟುಮಾಡುತ್ತಿದೆ. ಇದರಿಂದ ಕಾರ್ಮಿಕರು ಕಚೇರಿಗಳ ಸುತ್ತ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕೆಂಭಾವಿ ಹೋಬಳಿಗೆ ಸಿಗಬೇಕಾದ ಕಾರ್ಮಿಕ ಕಲ್ಯಾಣ ಸೌಲಭ್ಯಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗುತ್ತಿದೆ. ಸರ್ಕಾರದ ಕಾರ್ಮಿಕ ಕಲ್ಯಾಣ ನಿಧಿ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಶೈಕ್ಷಣಿಕ ಧನಸಹಾಯ, ವೈದ್ಯಕೀಯ ನೆರವು ಸೇರಿದಂತೆ ಹಲವು ಸೌಲಭ್ಯಗಳಿಂದ ಕಾರ್ಮಿಕರ ಕುಟುಂಬಗಳು ವಂಚಿತವಾಗಿವೆ’ ಎಂದು ಅವರು ಹೇಳಿದ್ದಾರೆ.

‘ಅಧಿಕಾರಿಗಳು ತಮ್ಮ ಮಲತಾಯಿ ಧೋರಣೆಯನ್ನು ತಕ್ಷಣವೇ ಬಿಟ್ಟು ಕೆಂಭಾವಿ ಹೋಬಳಿಯ ಪ್ರತಿಯೊಬ್ಬ ಅರ್ಹ ಕಾರ್ಮಿಕನಿಗೂ ಸ್ಮಾರ್ಟ್ ಕಾರ್ಡ್ ವಿತರಿಸಬೇಕು. ಜೊತೆಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಮಹಿಳೆ–ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ಕ್ರಮಕ್ಕೆ ಎಐಎಂಎಸ್‌ಎಸ್ ಆಗ್ರಹ

‘ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಕೆಂಭಾವಿ ಬಂದ್ ಕರೆ ನೀಡಿ ಕಾರ್ಮಿಕ ಇಲಾಖೆಯ ಕಚೇರಿಗೆ ಬೀಗ ಜಡಿಯುವ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...