ಯಾದಗಿರಿ | ದೋರನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ:‌ ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಓರ್ವನ ಕಾಲು ತುಂಡಾಗಿದ್ದು, ಇಬ್ಬರು ಯುವಕರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ

ಮರಳು ಹಾಗೂ ಮಣ್ಣು ಸಾಗಣೆ ಮಾಡುತ್ತಿದ್ದ ಟಿಪ್ಪರ್ ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ.

ಕೊಂಚಿ, ಕೊರಮ ಸಮುದಾಯದ ಮೂವರು ಯುವಕರು ಒಂದೇ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಬ್ಬ ಯುವಕನ ಕಾಲು ತೊಡೆಯಿಂದ ಸಂಪೂರ್ಣವಾಗಿ ಕತ್ತರಿಸಿ ಹೊರಬಿದ್ದಿರುವುದು ಘಟನೆಯ ಭೀಕರತೆಯನ್ನು ತೋರಿಸುತ್ತದೆ. ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಲ್ಲಿ ಗಾಯಗೊಂಡ ಮೂವರನ್ನೂ ಸ್ಥಳೀಯರು ಕೂಡಲೇ ರಕ್ಷಿಸಿ ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಅತಿ ಗಂಭೀರವಾಗಿದ್ದು, ಜೀವಾಪಾಯದ ಸ್ಥಿತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಳುನಾಡಿನ ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕ “ಕರಾವಳಿಯ ರಕ್ತ ಕಣ್ಣೀರು”

“ಅತಿವೇಗ, ನಿರ್ಲಕ್ಷ್ಯ ಚಾಲನೆ ಮತ್ತು ನಿಯಂತ್ರಣ ರಹಿತ ಮರಳು ಸಾಗಾಣಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈಶ್ವರ್ ಎಂಬ ಯುವಕ ಸಾರ್ವಜನಿಕ ಆಸ್ಪತ್ರೆ ಶಹಾಪುರದಲ್ಲಿ ಮರಣ ಹೊಂದಿದ್ದಾನೆ ಹಾಗೂ ಇಬ್ಬರೂ ಯುವಕರಲ್ಲಿ ಒಬ್ಬರು ಕಲಬುರಗಿ ಹಾಗೂ ಒಬ್ಬರು ಇಲ್ಲೇ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ” ಎಂದು ನಿಜಾಮುದ್ದಿನ್ ಐ ಎಸ್ ಮಾಹಿತಿ ನೀಡಿದ್ದಾರೆ.

“ಸ್ಥಳದಲ್ಲಿ ಪಿಐ ಸಾಹೇಬರು ತನಿಖೆ ಕೈಗೊಂಡಿದ್ದು, ಅಪಘಾತ ಮಾಡಿದ ವಾಹನ ಯಾವುದೆಂದು ತಿಳಿದುಬಂದಿಲ್ಲ. ದೂರು ದಾಖಲಾದ ಬಳಿಕ ತಿಳಿಸಲಾಗುವುದು, ಸದ್ಯಕ್ಕೆ ತನಿಖೆ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...