ಯಾದಗಿರಿ | “ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದು”: ಶರಣಪ್ಪ ಸಲಾದಪುರ್

Date:

“ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.” ಎಂದು ಶರಣಪ್ಪ ಸಲಾದಪುರ್ ಅವರು ಹೇಳಿದರು. ಯಾದಗಿರಿ ಜಿಲ್ಲೆಯ ಶಾಹಪುರ ಪಟ್ಟಣದ ವೈಷ್ಣವಿ ಫಂಕ್ಷನ್ ಹಾಲ್‌ನಲ್ಲಿ ಮಾತೃ ಛಾಯಾ ಹಿರಿಯ ಪ್ರಾಥಮಿಕ ಶಾಲೆಯ 14ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ‘ಮಾತೃಛಾಯಾ ಸಾಂಸ್ಕೃತಿಕ ಹಬ್ಬ’ ಹಾಗೂ ರಾಜ್ಯಮಟ್ಟದ ‘ಕನಕದಾಸ ಸೇವಾ ಪ್ರಶಸ್ತಿ’ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಉತ್ತಮ ಸಂಸ್ಕೃತಿ, ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮಕ್ಕಳಿಗೆ ಬೋಧಿಸುವುದು ಅಗತ್ಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ರಾಜ್ಯಮಟ್ಟದ ‘ಕನಕದಾಸ ಸೇವಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಸಾಹಿತ್ಯ ಕ್ಷೇತ್ರದಿಂದ ಸಂಜೀವಕುಮಾರ್ ಅತಿವಾಳೆ, ಸಾಮಾಜಿಕ ಕ್ಷೇತ್ರದಿಂದ ಅನಿಲ್ ತೇಜಪ್ಪ ಬಲ್ಲೂರ್, ಸಾಮಾಜಿಕ ಕಾರ್ಯಕರ್ತರಾಗಿ ಮಾನಪ್ಪ ಹಡಪದ್, ಶಿಕ್ಷಣ ಕ್ಷೇತ್ರದಿಂದ ಚಂದ್ರಕಲಾ ಗೂಗಲ್ ಹಾಗೂ ಮೀನಾಕ್ಷಿ ಆರ್. ಹೊಸಮನಿ, ವೈದ್ಯಕೀಯ ಕ್ಷೇತ್ರದಿಂದ ಡಾ. ಜಾಫರ್ ಷರೀಫ್ ನಿಡಗುಂದಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಅಂಬರೀಶ್ ದರ್ಶನಾಪುರ, ಮಂತಪ್ಪ ಕಂದಕೂರ್, ಡಾ. ಶರಣು ಬಿ. ಗದ್ದುಗೆ, ಯಲ್ಲಪ್ಪ ನರಿ ಹಾಗೂ ಮಲ್ಲಿಕಾರ್ಜುನ್ ಕಂದುಕುರ್ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಧರ್ಮ ಸೌಹಾರ್ದದ ಇಫ್ತಾರ್ ಕೂಟ, ಏಕತೆಯ ಸಂದೇಶ ಸಾರಿದ ಮುಸ್ಲಿಂ ಬಾಂಧವರು

ಶಾಲೆಯ ಸಂಸ್ಥಾಪಕರಾದ ತಿಪ್ಪಣ್ಣ ಖ್ಯಾತನ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸುರೇಶ್ ಬಾಬು ಅರುಣಿ ಕಾರ್ಯಕ್ರಮ ನಿರೂಪಿಸಿದರು. ಹೇನಾಬೇಗಂ ಸ್ವಾಗತಿಸಿದರು ಹಾಗೂ ಕುಮಾರಿ ಭಾಗ್ಯಶ್ರೀ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...