ಯಾದಗಿರಿ | ‘ಎರಡು ಹನಿಗಳು, ಪಲ್ಸ್ ಪೋಲಿಯೋ ವಿರುದ್ಧ ನಿರಂತರ ಗೆಲವು’ ಕಾರ್ಯಕ್ರಮಕ್ಕೆ ಚಾಲನೆ

Date:

‘ಎರಡು ಹನಿಗಳು, ಪಲ್ಸ್ ಪೋಲಿಯೋ ವಿರುದ್ಧ ನಿರಂತರ ಗೆಲವು’ ಎಂಬ ಮಹತ್ವದ ಆರೋಗ್ಯ ಜಾಗೃತಿ ಕಾರ್ಯಕ್ರಮಕ್ಕೆ ಭಾನುವಾರ ಯಾದಗಿರಿಯಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಾದಗಿರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ ಈ ಕಾರ್ಯಕ್ರಮವನ್ನು ಶಾಸಕ ಚನ್ನರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಿದರು.

842543

ಉದ್ಘಾಟನಾ ನುಡಿಗಳಾನ್ನಾಡಿದ ಶಾಸಕ, ಪಲ್ಸ್ ಪೋಲಿಯೋ ಅಭಿಯಾನದ ಮೂಲಕ ಭಾರತವು ಮಹತ್ವದ ಸಾಧನೆ ಮಾಡಿದ್ದು, ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಇದು ಅತ್ಯಂತ ಪರಿಣಾಮಕಾರಿ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪೋಲಿಯೋ ಹನಿ ಔಷಧಿ ನೀಡುವುದು ಅತ್ಯಂತ ಅಗತ್ಯವಾಗಿದ್ದು, ಯಾವುದೇ ಕಾರಣಕ್ಕೂ ಪೋಷಕರು ಈ ಅಭಿಯಾನದಿಂದ ದೂರ ಉಳಿಯಬಾರದು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಪ್ರಜಾಸೌಧ ನಿರ್ಮಾಣ ಪ್ರಸ್ತಾವನೆ ಈ ಕೂಡಲೇ ಕೈ ಬಿಡಬೇಕು ; ವಿಶ್ವ ನಾಟೇಕಾರ್

‘ಕಾರ್ಯಕ್ರಮದಲ್ಲಿ ಶಾಸಕ ಚನ್ನರೆಡ್ಡಿ ಪಾಟೀಲ್ ತುನ್ನೂರ್ ಅವರು ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಔಷಧಿ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ಪಲ್ಸ್ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಹಾಗೂ ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಬೇಕೆಂದು’ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆಡಳಿತದ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯರು, ಆರೋಗ್ಯ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯಮಾನ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...