ಯಾದಗಿರಿ | ಸುರಪುರ ಮಾಜಿ ಶಾಸಕ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

Date:

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯ ಮುಗಿಸಿ, ಹೈದರಾಬಾದ್ ಮಾರ್ಗವಾಗಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಬಿಜೆಪಿ ಮಾಜಿ ಶಾಸಕ ರಾಜು ಗೌಡ ಅವರ ಕಾರು ಯಾದಗಿರಿ ನಗರದ ಗಂಜ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.

ಶುಕ್ರವಾರ ತಡರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ, ಹಿಂದಿನಿಂದ ಬಂದ ಟ್ರಕ್ ಒಂದು ರಾಜು ಗೌಡ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರು ಭಾರೀ ಹಾನಿಗೊಳಗಾದರೂ, ಅದೃಷ್ಟವಶಾತ್ ಮಾಜಿ ಶಾಸಕ ರಾಜು ಗೌಡ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಸ್ವಲ್ಪ ತರಚಿದ ಗಾಯಗಳಾಗಿದ್ದು, ಗಂಭೀರ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಅಪಘಾತದ ನಂತರ ತಕ್ಷಣವೇ ರಾಜು ಗೌಡ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಹಣ ದೋಚಿದ ಕಳ್ಳರು

ಈ ಕುರಿತು ಮಾಧ್ಯಮಗಳೊಂದಿಗೆ ಮಾಜಿ ಶಾಸಕ ರಾಜು ಗೌಡ ಮಾತನಾಡಿ, ‘ಇಂದು ಮುಂಜಾನೆ ನಮ್ಮ ಕಾರು ಅಪಘಾತಕ್ಕೀಡಾಗಿತ್ತು. ಕಾರಿನ ಚಿತ್ರಗಳನ್ನು ನೋಡಿ ನಮ್ಮ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಅನೇಕರು ಕರೆ ಮಾಡಿ ವಿಚಾರಿಸಿದ್ದಾರೆ. ಆದರೆ ದೇವರ ಕೃಪೆ ಹಾಗೂ ಜನರ ಆಶೀರ್ವಾದದಿಂದ ನಾನು ಸಂಪೂರ್ಣ ಸುರಕ್ಷಿತವಾಗಿದ್ದೇನೆ. ಯಾರೂ ಆತಂಕಪಡಬೇಡಿ,’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...