ಉಡುಪಿ | ಸೌಗಾತ್-ಎ-ಮೋದಿ ಹೆಸರಿನಲ್ಲಿ ಬಿಜೆಪಿಯಿಂದ ಮುಸ್ಲಿಮರಿಗೆ ಈದ್ ಕಿಟ್

Date:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಮೋದಿ ಹೆಸರಲ್ಲಿ ಈದ್ ಕಿಟ್ ನೀಡಿದ್ದಾರೆ.

ಪವಿತ್ರ ರಂಜಾನ್‌ ಸಮಯದಲ್ಲಿ ಮುಸ್ಲಿಮರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಇದೇ ಕಾರ್ಯಕ್ರಮವನ್ನು ಕಾಂಗ್ರೆಸ್‌ನವರು ಮಾಡಿದಿದ್ದರೆ ಪರಿಸ್ಥಿತಿ ಹೇಗಿರುತಿತ್ತು ಕರಾವಳಿಯ ಸ್ವಯಂ ಘೋಷಿತ ಹಿಂದೂ ಶಾಸಕರು, ಮುಖಂಡರುಗಳ ಆರ್ಭಟ ಹೇಗಿರುತಿತ್ತು ಎಂಬುದನ್ನು ಒಮ್ಮೆ ಊಹಿಸಿಕೊಳ್ಳಿ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೃಷ್ಣ ಶೆಟ್ಟಿ, ಕಾಂಗ್ರೆಸ್ ನವರು ಈದ್ ಕಿಟ್ ಕೊಟ್ಟರೆ ಬಿಜೆಪಿ ನಾಯಕರು ಈಗಾಗಲೇ ಬೀದಿಗಿಳಿಯುತ್ತಿದ್ದರು. ಸದನದಲ್ಲಿ, ರಸ್ತೆಗಳಲ್ಲಿ ಕಾಂಗ್ರೆಸ್ ಮುಸ್ಲಿಮರ ತುಷ್ಟಿಕರಣ ಮಾಡುತ್ತಿದೆ, ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ರಾದ್ದಾಂತ ಮಾಡುತ್ತಿದ್ದರು. ಆದರೆ ಈಗ ‘ಸೌಗಾತ್-ಎ-ಮೋದಿ’ ಹೆಸರಿನಲ್ಲಿ ಬಿಜೆಪಿಯ ನಾಯಕರೇ ಮುಸ್ಲಿಮರಿಗೆ ಈದ್ ಕಿಟ್ ಕೊಡುತ್ತಿದ್ದಾರೆ. ಇದು ತುಷೀಕರಣವಲ್ಲವೆ? ಇದು ಓಲೈಕೆ ರಾಜಕಾರಣವಲ್ಲವೆ? ಇದನ್ನು ಪ್ರಶ್ನಿಸುವ ಎದೆಗಾರಿಕೆ, ದಮ್ಮು ತಾಕತ್ತು ಸುನಿಲ್ ಕುಮಾರ್ ಕಾರ್ಕಳ, ಯಶ್ಪಾಲ್ ಸುವರ್ಣ ಹಾಗೂ ಇಂತಹ ನಾಯಕರನ್ನು ಹಿಂಬಾಲಿಸುವ ನಾಯಕರಗಳಿಗೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...