ಉಡುಪಿ | ನ 28 ; ಪ್ರಧಾನಿ ಭೇಟಿ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆಗೆ ಜಿಲ್ಲಾಧಿಕಾರಿಗೆ ಶಾಸಕ ಯಶ್ಫಾಲ್‌ ಸುವರ್ಣ ಮನವಿ

Date:

ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ. ಜಿಲ್ಲಾಡಳಿತ ಸ್ಥಳೀಯ ರಜೆ ನೀಡಿದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಭಾಗಿಯಾಗಲು ಅನುಕೂಲವಾಗಲಿದೆ.

ಪ್ರಧಾನಮಂತ್ರಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಓಡಾಟದ ನಿರ್ಬಂಧವಿರುವ ಹಿನ್ನೆಲೆಯಲ್ಲಿ 28.11.2025 ರ ಶುಕ್ರವಾರದಂದು ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಸರಕಾರಿ ಕಛೇರಿಗಳೂ ಸೇರಿದಂತೆ ಜಿಲ್ಲಾದ್ಯಂತ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸಬೇಕೆಂದು ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

WhatsApp Image 2025 11 24 at 2.35.54 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...