ಉಡುಪಿ | ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ – ಶಾಸಕ ಯಶ್ಫಾಲ್ ಸುವರ್ಣ

Date:

ಉಡುಪಿ ನಗರದ ಮಲ್ಪೆಯಲ್ಲಿ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸ್ ಇಲಾಖೆ ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಎಫ್ ಐ ಆರ್ ದಾಖಲಿಸಿದೆ ಎಂದು ಉಡುಪಿ ಯಶಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಮೀನುಗಾರರ ಮೇಲೆ ದಲಿತ ದೌರ್ಜನ್ಯ ಕಾಯಿದೆಯಡಿ ಕಾಂಗ್ರೆಸ್ ಸರಕಾರದ ನಿರ್ದೇಶನದಂತೆ ಕೇಸು ದಾಖಲಿಸಿದ ಪೋಲೀಸ್ ಇಲಾಖೆಯ ಲೋಪವನ್ನು ಪ್ರಶ್ನಿಸಿದ ಮಾಜಿ ಸಚಿವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಮೂಲಕ ಮೀನುಗಾರರ ಪರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಯತ್ನ ಮಾಡುತ್ತಿದೆ.

ಕರಾವಳಿ ಜಿಲ್ಲೆಯ ಮೀನುಗಾರರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸುತ್ತಿರುವುದು ತೀರ ಖಂಡನಾರ್ಹ, ಪದೇ ಪದೇ ಮೀನುಗಾರರ ತಾಳ್ಮೆ ಪರೀಕ್ಷೆಗೆ ಮುಂದಾಗು ತ್ತಿದ್ದು ಜಿಲ್ಲೆಯ ಪ್ರಜ್ಞಾವಂತ ಜನತೆ ಈ ಬಗ್ಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...