ಉಡುಪಿ | ಯತ್ನಾಳ್‌ರಿಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು.

“ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ-ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ. ಅದನ್ನು ಹೇಳಿಕೊಂಡೇ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಚ್.ವಿಶ್ವನಾಥ್ ಹೇಳಿಕೆಗೆ ಗರಂ

ಬಿಯರ್‌ ರೇಟ್ ಜಾಸ್ತಿ ಮಾಡಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂಬ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವೆ ಹೆಬ್ಬಾಳ್ಕರ್, ಮಹಿಳೆಯರಿಗೆ ಮೊದಲು ಗೌರವ ಕೊಡಿ, ಬಿಯರ್ ಗಿಯರ್ ಆಮೇಲೆ ಮಾತಾಡಿ. ಭಾಗ್ಯ ಯೋಜನೆಗಳಿಂದ ಜಿಡಿಪಿ ಜಾಸ್ತಿಯಾಗಿದೆ. ವಿಶ್ವನಾಥ್ ಹಿರಿಯರು ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಬಿಡಲಿ” ಎಂದರು.

“ರಾಜ್ಯದಲ್ಲಿ, ದೇಶದಲ್ಲಿ ಮಹಿಳೆಯರಿಗೆ ಉತ್ತೇಜನ ಕೊಡಲು ಯೋಜನೆ ಮಾಡಿದ್ದೇವೆ.‌ ಈಗ ರಾಜ್ಯದಲ್ಲಿ ಮಹಿಳಾ ಸಬಲೀಕರಣ ನಡೆಯುತ್ತಿದೆ. ಬಸವಣ್ಣನ ನಾಡಿನಲ್ಲಿ ಮಹಿಳೆಯರನ್ನು ಸರಿಸಮನಾಗಿ ಕಾಣಿರಿ” ಎಂದು ಹೇಳಿದರು.

ಶೀಘ್ರವೇ ಉಡುಪಿಯಲ್ಲಿ ಜನತಾ ದರ್ಶನ ಮಾಡುತ್ತೇವೆ. ಉಡುಪಿ ಜಿಲ್ಲೆಯಲ್ಲಿ ಧರ್ಮ ದಂಗಲ್ ಗೆ ಅವಕಾಶ ಕೊಡಲ್ಲ. ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ ಎಂದು ಸಚಿವರು ತಿಳಿಸಿದರು.

ಕಾಂಗ್ರೆಸ್ಸಿಗರು ನಗರ ನಕ್ಸಲರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಧಾನಮಂತ್ರಿಗಳು ಯಾವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಪಕ್ಷಾತೀತವಾಗಿ ನರೇಂದ್ರ ಮೋದಿ ನಮ್ಮ ಪ್ರಧಾನಿಗಳು. ನಮ್ಮ ಪ್ರಧಾನಿ ಮೇಲೆ ನಮಗೆ ಗೌರವ ಇದೆ. ಕಾಂಗ್ರೆಸ್ಸನ್ನು ಗುರಿಯಾಗಿಸಿ ಅವರು ಈ ಮಾತನಾಡಿದ್ದರೆ ಅದು ಅಸಾಂವಿಧಾನಿಕ ಮಾತಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಲಿದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...