ಯಲಹಂಕ | ಕನ್ನಡ ಭಾಷೆ ಉದ್ಯೋಗ, ಅನ್ನದ ಭಾಷೆಯಾಗಬೇಕು: ಅಧ್ಯಾಪಕಿ ಸುಮಲತಾ

Date:

ಕನ್ನಡ ಭಾಷೆ, ಉದ್ಯೋಗ ಮತ್ತು ಅನ್ನದ ಭಾಷೆಯಾಗಬೇಕು. ಅನ್ಯಭಾಷೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾಷೆ ನಮ್ಮ ಕನ್ನಡ ಭಾಷೆ ಎಂದು ಕನ್ನಡ ಅಧ್ಯಾಪಕಿ ಸುಮಲತಾ ತಿಳಿಸಿದರು.

ದೊಡ್ಡಬಳ್ಳಾಪುರ ಮುಖ್ಯ ರಸ್ತೆಯಲ್ಲಿರುವ ಬೆಂಗಳೂರಿನ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ವ್ಯಾಪ್ತಿಯ ಖಾಸಗಿ ಕಾಲೇಜಾದ ಆರ್ ಟಿ ನಗರ ಪದವಿ ಕಾಲೇಜಿನಲ್ಲಿ ‘ಕನ್ನಡ ನಾಡು ನುಡಿ ಸಂಭ್ರಮ’ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಡಾ.ನಜುರಲ್, ವಾಣಿಜ್ಯ ವಿಭಾಗದ ನಿರ್ವಾಹಕಿ ಶೃತಿ ನೇತೃತ್ವದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶೇಷವಾಗಿ ಯಕ್ಷಗಾನ, ನೃತ್ಯ, ಭರತನಾಟ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾವಗೀತೆ, ಜಾನಪದ ಗೀತೆಗಳು, ಕನ್ನಡ ಸಿನಿಮಾ ಹಾಡುಗಳು ಕಾರ್ಯಕ್ರಮದಲ್ಲಿ ಗಮನ ಸೆಳೆದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕನ್ನಡ ಭಾಷೆ ಅನ್ನದ ಭಾಷೆ 1

ಈ ಸುದ್ದಿ ಓದಿದ್ದೀರಾ? ಕನಕಪುರ | ಇಂದಿನಿಂದ ಬೃಹತ್‌ ಕೃಷಿ ಮೇಳ

ವಿದ್ಯಾರ್ಥಿಗಳಿಗೆ ಚಟುವಟಿಕೆಗಳೊಂದಿಗೆ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ತಿಳಿಸುವಂತಹ ಕರ್ನಾಟಕದ ಆಹಾರಗಳನ್ನು ಪ್ರದರ್ಶಿಸಿದ ಭಿತ್ತಿಚಿತ್ರಗಳು ಹಾಗೂ ವಿದ್ಯಾರ್ಥಿಗಳ ಸೃಜನಶೀಲತೆ ಕಂಡುಬಂದಿತು.

ಪ್ರಾಂಶುಪಾಲರು ಕನ್ನಡ ನಾಡಿನ ಕುರಿತು ಮಾತನಾಡಿ, ಮಕ್ಕಳಿಗೆ ಕೆಲವು ಕಿವಿಮಾತುಗಳನ್ನು ಹೇಳಿದರು. ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇದೇ ವೇಳೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...