​ಯಲ್ಲಾಪುರ | ಪಟ್ಟಣ ಪಂಚಾಯತ ನಲ್ಲಿ ₹35 ಲಕ್ಷ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಕರವೇ (ಗಜಸೇನೆ) ಆಗ್ರಹ

Date:

ಯಲ್ಲಾಪುರ: ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜು ಮತ್ತು ಕೊಳವೆ ಬಾವಿಗಳ ದುರಸ್ತಿ ಹೆಸರಿನಲ್ಲಿ ಸುಮಾರು 35 ಲಕ್ಷ ರೂಪಾಯಿಗಳ ಬೃಹತ್ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಗಜಸೇನೆ) ತಾಲೂಕು ಘಟಕದ ಅಧ್ಯಕ್ಷರಾದ ಶಮಶುದ್ಧೀನ್ ಮಾರಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಧಾರವಾಡದ ಸಂಚಾರಿ ಪೀಠದ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿರುವ ಅವರು, ಪಟ್ಟಣದಲ್ಲಿ ಹಳೆಯ ಪೈಪ್‌ಲೈನ್ ಹಾಗೂ ಕೊಳವೆ ಬಾವಿಗಳ ದುರಸ್ತಿ ನೆಪದಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಬಿಲ್ ಸೃಷ್ಟಿಸಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ದೂರಿದ್ದಾರೆ.

ಈ ಹಗರಣದಲ್ಲಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳು ಹಾಗೂ ಸಹಾಯಕ ಇಂಜಿನಿಯರ್ ಅವರು ಗುತ್ತಿಗೆದಾರರೊಂದಿಗೆ ಶಾಮೀಲಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ . ಶಮಶುದ್ದೀನ ಮಾರಕರ ಅವರು ಈ ಹಗರಣದ ಬಗ್ಗೆ ಕಳೆದ ಜುಲೈ 28ರಂದೇ ಜಿಲ್ಲಾಧಿಕಾರಿಗಳಿಗೆ ಹಾಗೂ ಶಿರಸಿ ಸಹಾಯಕ ಆಯುಕ್ತರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ದೂರಿನನ್ವಯ ತನಿಖೆಗೆ ಬಂದಿದ್ದ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸರಿಯಾಗಿ ಸ್ಥಳ ಪರಿಶೀಲನೆ ನಡೆಸದೆ, ಕೇವಲ ದಾಖಲೆಗಳನ್ನು ಸರಿಹೊಂದಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿ ‘ಹಿಂಬರಹ’ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಹಳೆಯ ಪೈಪ್‌ಲೈನ್ ಹಾಗೂ ಕೆಟ್ಟುಹೋದ ಕೊಳವೆ ಬಾವಿಗಳ ದುರಸ್ತಿ ನೆಪದಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಬಿಲ್ ಸೃಷ್ಟಿಸಿ ಸರ್ಕಾರದ ಹಣವನ್ನು ಲೂಟಿ ಮಾಡಲಾಗಿದೆ. ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಕಡ್ಡಾಯವಾಗಿ ತೆಗೆಯಬೇಕಾದ ಜಿ.ಪಿ.ಎಸ್ ಫೋಟೋಗಳನ್ನು ಸಹ ಅಧಿಕಾರಿಗಳು ತೆಗೆದಿಲ್ಲ. ಈ ಭ್ರಷ್ಟಾಚಾರದಲ್ಲಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳು ಹಾಗೂ ಸಹಾಯಕ ಇಂಜಿನಿಯರ್ ಅವರು ಗುತ್ತಿಗೆದಾರರೊಂದಿಗೆ ನೇರವಾಗಿ ಶಾಮೀಲಾಗಿದ್ದಾರೆ ಎಂದು ಮಾರಕರ ಅವರು ದೂರು ಅರ್ಜಿಯಲ್ಲಿ ತಿಳಿಸಿದ್ದಾರೆ.

ದೂರುದಾರರಿಗೆ ಪ್ರಾಣ ಬೆದರಿಕೆ: ಅಕ್ರಮದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಸಂಬಂಧಪಟ್ಟ ಗುತ್ತಿಗೆದಾರರು ತಮ್ಮ ಆಪ್ತರ ಮೂಲಕ ತಮಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಸುಳ್ಳು ಕೇಸ್ ದಾಖಲಿಸುವ ಬೆದರಿಕೆ ಒಡ್ಡುತ್ತಿದ್ದಾರೆ. ಇದರಿಂದ ತಮಗೆ ಮಾನಸಿಕವಾಗಿ ನೋವುಂಟಾಗಿದೆ ಎಂದು ಅವರು ನ್ಯಾಯಾಧೀಶರಿಗೆ ಸಲ್ಲಿಸಿದ ಮನವಿಯಲ್ಲಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಅಜಿತ್ ನಾಯ್ಕ್ ಹತ್ಯೆ ಕೇಸ್: 7 ವರ್ಷಗಳ ಸುದೀರ್ಘ ವಿಚಾರಣೆ ಅಂತ್ಯ, ತೀರ್ಪಿನತ್ತ ಎಲ್ಲರ ಚಿತ್ತ!

35 ಲಕ್ಷ ರೂಪಾಯಿಗಳ ಈ ಹಗರಣದ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಾಗಬೇಕು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೆ ಅಕ್ರಮವಾಗಿ ಕೊಳವೆ ಬಾವಿ ಕೊರೆಯುತ್ತಿರುವ ವಾಹನಗಳನ್ನು ತಕ್ಷಣ ಜಪ್ತಿ ಮಾಡಬೇಕು, ಸರ್ಕಾರಿ ಬೊಕ್ಕಸಕ್ಕೆ ಮೋಸ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು, ಎಂದು ಮಾರಕರ ಅವರು ಮನವಿ ಮಾಡಿದ್ದಾರೆ‌

ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕೆಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...