ಯಲ್ಲಾಪುರ | ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ 8.70 ಲಕ್ಷ ರೂ. ವಂಚನೆ

Date:

ಯಲ್ಲಾಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ, ಯಲ್ಲಾಪುರ ತಾಲೂಕಿನ ಏಳು ಮಂದಿ ನಿರುದ್ಯೋಗಿ ಯುವಕ-ಯುವತಿಯರಿಂದ ಒಟ್ಟು 8.70 ಲಕ್ಷ ರೂ. ವಂಚನೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ರಾಯಚೂರು ಜಿಲ್ಲೆಯ ವ್ಯಕ್ತಿಯೊಬ್ಬನ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಕೆಂಚಪ್ಪ ಗ್ಯಾನಪ್ಪ ಹಂಚಿನಾಳ (38) ಎನ್ನುವ ವ್ಯಕ್ತಿಯೇ ವಂಚನೆ ಎಸಗಿದ ಆರೋಪಿಯಾಗಿದ್ದಾನೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯಾದ ಕೆಂಚಪ್ಪನು ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದ ಶ್ರೀನಾಥ ಶ್ರೀಕಾಂತ ಕಳಸ ಮತ್ತು ಅವರ ಸ್ನೇಹಿತರನ್ನು ಸಂಪರ್ಕಿಸಿ, ತಾನು ಜಲ ಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳ ಪರಿಚಯ ಹೊಂದಿದ್ದೇನೆ, ನಿಮಗೆ ಅಲ್ಲಿ ಖಾಯಂ ಸರ್ಕಾರಿ ಹುದ್ದೆ ಕೊಡಿಸಬಹುದು ಎಂದು ಭರವಸೆ ನೀಡಿದ್ದಾನೆ. ಆತನ ಮಾತು ನಂಬಿದ ಶ್ರೀನಾಥ ಕಳಸ ಹಾಗೂ ಅವರ ಸ್ನೇಹಿತರಾದ ಗೊಗದ್ದೆ ಮಾವಿನಮನೆಯ ಗೌರೀಶ ಮರಾಶಾ, ಕಳಚೆಯ ರವಿ ಗೌಡ, ಹೆಗ್ಗಾರಗದ್ದೆಯ ಗಜಾನನ ಪಟಗಾರ, ಕಳಚೆಯ ಪ್ರಭಾಕರ ಗೌಡ, ತಳಕೆಬೈಲಿನ ಶ್ವೇತಾ ಮರಾಠಿ ಹಾಗೂ ವಜ್ರಳ್ಳಿಯ ರಾಮಚಂದ್ರ ಕೊಡಕಣಿಕರ ಅವರು ಹಂತ ಹಂತವಾಗಿ ಹಣ ನೀಡಿದ್ದಾರೆ.

ದೂರಿನ ಪ್ರಕಾರ, 2024ರ ನವೆಂಬರ್ 3ರಿಂದ 2025ರ ಮಾರ್ಚ್ 28ರವರೆಗೆ, ಆರೋಪಿಯು ಶ್ರೀನಾಥ ಮತ್ತು ಗೌರೀಶರಿಂದ 3.85 ಲಕ್ಷ ರೂ. ಹಾಗೂ ಉಳಿದವರಿಂದ 4.85 ಲಕ್ಷ ರೂ. ಸೇರಿ ಒಟ್ಟು 8.70 ಲಕ್ಷ ರೂ. ಪಡೆದುಕೊಂಡಿದ್ದಾನೆ. ಆದರೆ ಹಲವಾರು ತಿಂಗಳು ಕಳೆದರೂ ಯಾವುದೇ ಸರ್ಕಾರಿ ಹುದ್ದೆ ಸಿಕ್ಕಿರಲಿಲ್ಲ. ಇದರಿಂದ ಅನುಮಾನಗೊಂಡ ಸಂತ್ರಸ್ತರು ಕೆಂಚಪ್ಪನನ್ನು ಸಂಪರ್ಕಿಸಿದಾಗ ಆತ ತಪ್ಪಿಸಿಕೊಂಡು ಕಾಲಹರಣ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

ಕೆಲಸವೂ ಕೊಡಿಸದೆ ಹಣವನ್ನೂ ಹಿಂತಿರುಗಿಸದೆ ಹೋಗಿದ್ದರಿಂದ‌ ಭಯಗೊಂಡ ಸಂತ್ರಸ್ತರು ತಮ್ಮ ಕುಟುಂಬದವರ ಸಲಹೆಯೊಂದಿಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಸಹಾಯಕ ಪೊಲೀಸ್ ಉಪನಿರೀಕ್ಷಕಿ ರೇಣುಕಾ ಬೆಳಗಟ್ಟಿ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...