ಯಲ್ಲಾಪುರ‌ ಅಪಘಾತ | ಮೃತರ ಕುಟುಂಬಗಳಿಗೆ ರಾಜ್ಯದಿಂದ ತಲಾ ₹3 ಲಕ್ಷ, ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

Date:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿಯವರೂ ಕೂಡಾ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹2 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶದ ಮೇರೆಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ಮೊತ್ತ ಬಿಡುಗಡೆಯ ಆದೇಶ ಪ್ರತಿ ನೀಡಿದರು. ಶಾಸಕ ಶಿವರಾಮ ಹೆಬ್ಬಾರ, ಸವಣೂರು ಶಾಸಕ ಯಾಸಿರ್ ಖಾನ್ ಪಠಾಣ ಆದೇಶ ಪ್ರತಿಯನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.

ದುರ್ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 12 ಜನರಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಲ್ಲಾಪುರ ಆಸ್ಪತ್ರೆ ಹಾಗೂ ಹುಬ್ಬಳ್ಳಿ‌ ಕಿಮ್ಸ್‌ನಲ್ಲಿ ಮೃತದೇಹಗಳು ಇವೆ. ಅವುಗಳನ್ನು ಸವಣೂರಿಗೆ ತರುವ ಕೆಲಸ ನಡೆಯುತ್ತಿದ್ದು, ಮೃತರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ ಅಪಘಾತ | ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆ ವೈದ್ಯರು ಹಿಂದೇಟು; ಮೃತ ವ್ಯಕ್ತಿಯ ಸಂಬಂಧಿಕರ ಆರೋಪ

ಹಾವೇರಿ ಪೊಲೀಸ್ ಹೆಚ್ಚುವರಿ ಎಸ್‌ಪಿ ಲಕ್ಷ್ಮಣ ಶಿರಕೋಳ, ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಶಾಸಕ‌ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ಯಲ್ಲಾಪುರ ಆಸ್ಪತ್ರೆಯಲ್ಲಿಯೇ ಬೀಡು ಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...