ಯಲ್ಲಾಪುರ | ಶಾಸಕರಿಂದ ಉದ್ಯೋಗ ಮೇಳ ಉದ್ಘಾಟನೆ: 345 ಅಭ್ಯರ್ಥಿಗಳ ಆಯ್ಕೆ, 85 ವಿದ್ಯಾರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

Date:

ಯಲ್ಲಾಪುರ: ಉದ್ಯೋಗ ಮೇಳಗಳು ಯುವಕರ ಬದುಕಿನ ದಿಕ್ಕು ಬದಲಿಸುವ ಶಕ್ತಿಯುತ ವೇದಿಕೆಗಳು. ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಕರು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಕರೆ ನೀಡಿದರು.

ಅವರು ಶನಿವಾರ ಯಲ್ಲಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯಿತಿ ಉತ್ತರ ಕನ್ನಡ, ತಾಲೂಕು ಪಂಚಾಯಿತಿ ಯಲ್ಲಾಪುರ ಹಾಗೂ ಯಲ್ಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾ ಅಧಿಕಾರಿ ಜಿ.ಸತೀಶ್, ಯುವಕ–ಯುವತಿಯರ ಉದ್ಯೋಗಾರ್ಹತೆಯನ್ನು ಹೆಚ್ಚಿಸಿ, ಅವರು ಸ್ವಾವಲಂಬನೆಯತ್ತ ಮುನ್ನಡೆಯಲು ಈ ಮೇಳ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಆರ್.ಡಿ. ಜನಾರ್ಧನ್ ಮಾತನಾಡಿ, ಉದ್ಯೋಗ ಮೇಳಗಳು ಪದವಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸರಿಯಾದ ಮಾರ್ಗದರ್ಶನ ನೀಡುತ್ತವೆ. ಪದವಿ ಹಂತದಲ್ಲಿಯೇ ಉದ್ಯೋಗಾವಕಾಶಗಳ ಪರಿಚಯ ನೀಡುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಬಿಸಿಯೂಟದಿಂದ 44 ಮಕ್ಕಳು ಅಸ್ವಸ್ಥ: ಅಧಿಕಾರಿಗಳಿಂದ ಆಸ್ಪತ್ರೆಗೆ ಭೇಟಿ, ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್

ಒಟ್ಟು ಭಾಗವಹಿಸಿದ ಉದ್ಯೋಗಾಕಾಂಕ್ಷಿಗಳು 1735, ಭಾಗವಹಿಸಿದ ಕಂಪನಿಗಳು 63, ಅಂತಿಮವಾಗಿ ಆಯ್ಕೆಯಾದವರು 345, ಮುಂದಿನ ಹಂತದ ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಆದವರು 482, ಅದರಲ್ಲಿ 85 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಯಿತುಮೇಳದಲ್ಲಿ ಜಿಲ್ಲೆಯ ಪ್ರಮುಖ ಕಂಪನಿಗಳು, ವಿವಿಧ ಸಂಸ್ಥೆಗಳು ಹಾಗೂ ಕೌಶಲ್ಯಾಭಿವೃದ್ಧಿ ಘಟಕಗಳು ಭಾಗವಹಿಸಿ, ಯುವಕರಿಗೆ ಉದ್ಯೋಗ ಪರಿಚಯ ಮತ್ತು ನೇಮಕಾತಿಗೆ ಉತ್ತಮ ವೇದಿಕೆ ಒದಗಿಸಿದವು. ಉದ್ಯೋಗಾಕಾಂಕ್ಷಿಗಳಿಂದಲೂ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವರಿಗೆ ಹೊಸ ಭವಿಷ್ಯದ ಭರವಸೆ ಮೂಡಿಸಿತು.

ಉದ್ಯೋಗ ಮೇಳದಲ್ಲಿ ತಾಲೂಕು ಪಂಚಾಯಿತಿ ಯಲ್ಲಾಪುರದ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ದನವಾಡಕರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವಿಜಯ್ ಮಿರಾಶಿ, ಜಿಲ್ಲಾ ವ್ಯವಸ್ಥಾಪಕರು (ಕೌಶಲ್ಯ) ವಿಜಯಕುಮಾರ್ ಹೆಗಡೆ, ಸಚಿನ್ ನಾಯ್ಕ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...