ಯಲ್ಲಾಪುರ | ಕಟಾವು ಹಂತದಲ್ಲಿರುವ ಭತ್ತಕ್ಕೆ ಕೀಟಗಳ ಬಾಧೆ; ರೈತರು ಕಂಗಾಲು

Date:

ಯಲ್ಲಾಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭತ್ತದ ಬೆಳೆಗೆ ಕೀಟಗಳು ಹಾಗೂ ರೋಗಗಳ ಬಾಧೆ ಕಾಣಿಸಿಕೊಂಡಿದ್ದು, ಕೃಷಿ ಇಲಾಖೆ ರೈತರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಕಟಣೆನೀಡಿದೆ. ತಾಲ್ಲೂಕಿನ ಮಂಚಿಕೇರಿ, ಕೆರೆಹೊಸಳ್ಳಿ, ಬಿದ್ರಳ್ಳಿ, ಉಮ್ಮಚಗಿ, ತೋಳಗೋಡ, ಹೆಮ್ಮಾಡಿ, ಭರಣಿ ಮತ್ತು ಭರತನಹಳ್ಳಿ ಗ್ರಾಮಗಳಲ್ಲಿ ಭತ್ತದ ಬೆಳೆ ಕಟಾವು ಹಂತದಲ್ಲಿ ಇದೆ ಈ ಸಂದರ್ಭದಲ್ಲಿ ಭತ್ತದ ಹೊಲಗಳಲ್ಲಿ ಕಂದುಜಿಗಿ ಹುಳು, ಎಲೆಸುರುಳಿ ಹುಳುಗಳ ಜೊತೆಗೆ ಬೆಂಕಿರೋಗದ ಬಾಧೆ ಭತ್ತದ ಜಮೀನಿನಲ್ಲಿ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿರಸಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಸಹಕಾರದಿಂದ ಕೃಷಿ ಇಲಾಖೆ ಸಿಬ್ಬಂದಿ ಈಚೆಗೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈತರಿಗೆ ಸೂಕ್ತ ಸಸ್ಯ ಸಂರಕ್ಷಣಾ ಕ್ರಮಗಳನ್ನು ಶಿಫಾರಸು ಮಾಡಿದ್ದಾರೆ.

ಕಂದುಜಿಗಿ ಹುಳು ಬಾಧಿತ ಹೊಲಗಳಲ್ಲಿ ಗದ್ದೆಗೆ ನೀರು ಕಡಿಮೆ ಇರಿಸುವಂತೆ ಸಲಹೆ ನೀಡಿದ್ದು, ಕೀಟನಾಶಕಗಳಾದ ಇಮಿಡಾಕ್ಲೋಪ್ರಿಡ್ (0.3 ಮಿಲಿ/ಲೀಟರ್ ನೀರು) ಅಥವಾ ಥಯೋಮೆಥಾಕ್ಸಾಮ್ (0.5 ಗ್ರಾಂ/ಲೀಟರ್ ನೀರು) ಅಥವಾ ಬುಪ್ರೋಪಿಜಿನ್ (1.5 ಮಿಲಿ/ಲೀಟರ್ ನೀರು) ಬಳಸಿ ಎಕರೆಗೆ 200 ಲೀಟರ್ ದ್ರಾವಣ ತಯಾರಿಸಿ ಭತ್ತದ ಸಸಿಗಳು ಸಂಪೂರ್ಣ ಒದ್ದೆಯಾಗುವಂತೆ ಸಿಂಪಡಿಸಬೇಕೆಂದು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲೆಸುರುಳಿ ಕೀಟದ ನಿಯಂತ್ರಣಕ್ಕಾಗಿ ಪ್ರೊಫೆನೊಫಾಸ್ 50 ಇಸಿ (2 ಮಿಲಿ/ಲೀಟರ್) ಅಥವಾ ಕ್ಲೋರೋಪೈರಿಪಾಸ್ 20 ಇಸಿ (2 ಮಿಲಿ/ಲೀಟರ್) ಅಥವಾ ಕ್ವಿನಾಲ್‌ಫಾಸ್ 25 ಇಸಿ (2 ಮಿಲಿ/ಲೀಟರ್) ಬೆರೆಸಿ ಎಕರೆಗೆ 200 ಲೀಟರ್ ಸಿಂಪರಣಾ ದ್ರಾವಣವನ್ನು ಸಿಂಪಡಿಸಬೇಕೆಂದು ಸಲಹೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಅದೇ ರೀತಿ, ಕಾಂಡ ಕೊರೆಯುವ ಹುಳುವಿನ ಹತೋಟಿಗಾಗಿ ಈ ಮೂರರಲ್ಲಿ ಯಾವುದಾದರೂ ಒಂದು ಕೀಟನಾಶಕವನ್ನು 2 ಮಿಲಿ ಪ್ರಮಾಣದಲ್ಲಿ ಪ್ರತೀ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕೆಂದು ಅಧಿಕಾರಿಗಳು ರೈತರಿಗೆ ತಿಳಿಸಿದರು. ಕೃಷಿ ಇಲಾಖೆ ರೈತರಿಗೆ ನಿಯಮಿತವಾಗಿ ಹೊಲಗಳ ಪರಿಶೀಲನೆ ನಡೆಸಿ, ಬಾಧೆ ತೀವ್ರವಾಗುವ ಮುನ್ನವೇ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...