ಯಲ್ಲಾಪುರ | ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರ ಜಿಲ್ಲಾ ಕುಖ್ಯಾತ ಕಳ್ಳನ ಬಂಧನ

Date:

ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಅಂತರ ಜಿಲ್ಲಾ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ಬಂಧನದ ಮೂಲಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಸುಮಾರು 12 ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಬಂಧಿತ ಆರೋಪಿಯನ್ನು ಜೋಯಿಡಾ ತಾಲೂಕಿನ ಅಣಶಿ ಗ್ರಾಮದ ನಿವಾಸಿ, ಸಮೀರ್ ಅಲಿಯಾಸ್ ಆರ್ಯ ಸೂರಜ್ ಪಾಟೀಲ್ (21) ಎಂದು ಗುರುತಿಸಲಾಗಿದೆ.

ಮನೆ ಕಳ್ಳತನ: ದಿನಾಂಕ 01-11-2025 ರಂದು ಯಲ್ಲಾಪುರ ತಾಲೂಕಿನ ಸಾರಬೈಲ ಕಣ್ಣಿಗೇರಿ ಪಂಚಾಯತ್ ವ್ಯಾಪ್ತಿಯ ಮಿಲಾಗ್ರಿ ವಾಜ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯಿಂದ ಸುಮಾರು ₹ 1.13 ಲಕ್ಷ ಮೌಲ್ಯದ 17 ಗ್ರಾಂ ಚಿನ್ನ ಮತ್ತು 25 ಗ್ರಾಂ ಬೆಳ್ಳಿಯನ್ನು ಕಳವು ಮಾಡಲಾಗಿತ್ತು. ಮೆಡಿಕಲ್ ಶಾಪ್ ಕಳ್ಳತನ: ನವೆಂಬರ್ 21 ರಂದು ಪಟ್ಟಣದ ಮಲವಳ್ಳಿಯಲ್ಲಿರುವ ಸಂಕೇತ ಭಟ್ ಅವರ ಒಡೆತನದ ‘ಸೀತಾಲಕ್ಷ್ಮಿ ಮೆಡಿಕಲ್’ನಿಂದ ₹ 45,000 ನಗದು ಹಣ ಕಳುವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡೂ ಪ್ರಕರಣಗಳ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿದರು. ಖಚಿತ ಮಾಹಿತಿಯ ಆಧಾರದ ಮೇಲೆ ಡಿ. 7ರಂದು ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ವಿಚಾರಣೆ ವೇಳೆ, ಆರೋಪಿಯು ತಾನು ಸಾರಬೈಲ್‌ನಲ್ಲಿ ಮನೆ ಕಳ್ಳತನ ಮತ್ತು ಬೆಲ್ ರೋಡ್‌ನಲ್ಲಿ ಮೆಡಿಕಲ್ ಶಾಪ್ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ತನಿಖೆ ವೇಳೆಯಲ್ಲಿ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈತನ ಮೇಲೆ ಸುಮಾರು 12 ಕಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ ? ಕಾರವಾರ | ಮಾದಕ ವಸ್ತು ನಿಷೇಧಿಸಿದ್ದಕ್ಕೆ ಪ್ರತೀಕಾರ: ಜೈಲರ್ ಸೇರಿ 3 ಸಿಬ್ಬಂದಿ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ!

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ., ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ ಮತ್ತು ಜಗದೀಶ್ ಎಂ.ಎನ್., ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಯಲ್ಲಾಪುರ ಸಿಪಿಐ ರಮೇಶ್ ಹನಾಪುರ ನೇತೃತ್ವದ ವಿಶೇಷ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದೆ.

ತನಿಖಾ ತಂಡದಲ್ಲಿ ಪಿಎಸ್ಐಗಳಾದ ರಾಜಶೇಖರ್ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ, ಶೇಡಜಿ ಚವ್ಹಾಣ, ಸಿಬ್ಬಂದಿಗಳಾದ ಮೊಹಮ್ಮದ್ ಶಫೀ ಶೇಖ್, ಶೋಭಾ ನಾಯ್ಕ್, ಗಿರೀಶ್ ಲಮಾಣಿ, ಪರಮೇಶ್ವರ ಕೆ., ನಾಗರಾಜ್ ನಾಯ್ಕ್, ನೀಲಪ್ಪ ಸಿ.ಟಿ. ಮತ್ತು ಕಾರವಾರದ ತಾಂತ್ರಿಕ ಘಟಕದ ಉದಯ ಗುನಗಾ ಅವರು ಪ್ರಮುಖ ಪಾತ್ರ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...