ಯಲ್ಲಾಪುರ | ಸರಣಿ ಮನೆಗಳ್ಳನ ಬಂಧನ; 18 ಲಕ್ಷ ಮೌಲ್ಯದ ಚಿನ್ನ, ಸ್ಕೂಟಿ ಜಪ್ತಿ

Date:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ ಮತ್ತು ಮಂಚಿಕೇರಿ ಪ್ರದೇಶಗಳಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಹಗಲಿನಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಸುಮಾರು ₹18.88 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಕೆಲ ತಿಂಗಳ ಹಿಂದೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಗಲು ಕಳ್ಳತನದ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಬೀಗ ಹಾಕಿ ಮನೆ ಬಿಟ್ಟಿರುವವರ ಒಂಟಿ ಮನೆಗಳನ್ನು ಗುರುತಿಸಿ, ಯಾರೂ ಇಲ್ಲದ ಸಮಯದಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಚಟುವಟಿಕೆ ಪೊಲೀಸರ ಗಮನಕ್ಕೆ ಬಂದಿತ್ತು. ಪ್ರಕರಣಗಳು ದಾಖಲಾಗುತ್ತಿದ್ದಂತೆಯೇ, ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದರು. ತನಿಖೆ ವೇಳೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ, ಯಲ್ಲಾಪುರ ತಾಲೂಕಿನ ಮಡಿವಾಳಕೇರಿ ಹಾಸಣಗಿ ಗ್ರಾಮದ ನಿವಾಸಿ ಈಶ್ವರ ಮಂಜುನಾಥ ಸಿದ್ದಿ (32)ಯನ್ನು ಅಂಕೋಲಾ ತಾಲೂಕಿನ ಬಾಳೆಗುಳಿ ಕ್ರಾಸ್ ಬಳಿ ವಶಕ್ಕೆ ಪಡೆಯಲಾಯಿತು. ವಿಚಾರಣೆ ವೇಳೆ ಆರೋಪಿಯು ಯಲ್ಲಾಪುರ ಪ್ರದೇಶದಲ್ಲಿ ಹಗಲು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

ನ್ಯಾಯಾಲಯದ ಅನುಮತಿ ಪಡೆದು, ಈತನನ್ನು ಪೊಲೀಸ್ ಕಸ್ಟಡಿಗೆ ಒಳಪಡಿಸಲಾಯಿತು. ಬಂಧಿತ ಆರೋಪಿಯಿಂದ ಒಟ್ಟು 137 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಅಂದಾಜು ಮೌಲ್ಯ ₹18,08,400. ಜೊತೆಗೆ ಕೃತ್ಯಕ್ಕೆ ಬಳಸಿದ್ದ ₹80,000 ಮೌಲ್ಯದ ಡಿಯೋ ಸ್ಕೂಟಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿರಸಿ | ಮಳೆ ಬಂದರೆ ಹೊಂಡ, ಬಿಸಿಲಾದ್ರೆ ಧೂಳು: ಭೀಮಘರ್ಜನೆಯ ವಿಡಿಯೋ ವೈರಲ್

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಇವರ ಮಾರ್ಗದರ್ಶನದಲ್ಲಿ, ಯಲ್ಲಾಪುರ ಪೊಲೀಸ್ ನಿರೀಕ್ಷಕ ರಮೇಶ ಎಚ್. ಹನಾಪುರ ಹಾಗೂ ಪಿಎಸ್ಐಗಳಾದ ರಾಜಶೇಖರ ವಂದಲಿ, ಮಹಾವೀರ ಡಿ. ಕಾಂಬಳೆ, ಸಿದ್ದಪ್ಪ ಗುಡಿ, ಶೇಡಜಿ ವಾಸು ಚವ್ಹಾಣ್ ಮತ್ತು ಸಿಬ್ಬಂದಿ ವರ್ಗ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಕರಣ ಬೇಧಿಸಿದ ತಂಡದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...