ಯಲ್ಲಾಪುರ | ಮರ ಬಿದ್ದು ಗರ್ಭಿಣಿ ಸಹಿತ ಇಬ್ಬರು ಸಾವು; ಮೂವರು ಮಕ್ಕಳು ಗಂಭೀರ

Date:

ಮರ ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಹಾಗೂ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದಿದೆ.

ಸಾವಿತ್ರಿ ಬಾಗು ಖರಾತ್ (28) ಮತ್ತು ವಿದ್ಯಾರ್ಥಿನಿ ಸ್ವಾತಿ ಬಾಬು ಖರಾತ್ (17) ಮೃತಪಟ್ಟವರು. ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ಸಾವಿತ್ರಿ ಅಂಗನವಾಡಿಯಿಂದ ಹೋಗುತ್ತಿದ್ದಾಗ ಮರ ದಿಢೀರ್ ಮುರಿದು ಅವರ ಮೇಲೆಯೇ ಬಿದ್ದಿದೆ. ಈ ಅಪಘಾತದಲ್ಲಿ ಸಾವಿತ್ರಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಸ್ವಾತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.

ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2) ಮತ್ತು ಶಾಂಭವಿ ಬಾಬು ಖರಾತ್ (4) ಎಂಬ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ, ಸಾನ್ವಿ ಬಾಬು ಕೊಕರೆ (5), ವಿನಯ್ ಲಕ್ಕು ಕೊಕರೆ (5) ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಉತ್ತರ ಕನ್ನಡ | ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ತುಂಡಾಗಿವೆ. ಸುದ್ದಿ ತಿಳಿದ ಕೂಡಲೇ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...