ಕರ್ನಾಟಕದಲ್ಲಿ ಇದೇ ಮೊದಲು; ಮೂಳೆ ದಾನ ಮಾಡಿದ ಯುವಕ

Date:

ಅಪಘಾತಕ್ಕೀಡಾಗಿ ‘ಬ್ರೈನ್‌ ಡೆಡ್’ ಆಗಿದ್ದ ಯುವಕನ ಮೂಳೆಯನ್ನು ಆತನ ಕುಟುಂಬಸ್ಥರು ದಾನ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಆತನ ಮೂಳೆಗಳನ್ನು ಕ್ಯಾನ್ಸರ್‌ಗೆ ತುತ್ತಾಗಿದ್ದ ಆರು ಮಕ್ಕಳ ಕಾಲುಗಳಿಗೆ ಅಳವಡಿಸಲಾಗುತ್ತಿದ್ದು, ಆ ಮಕ್ಕಳು ಓಡಾಡಲು ಸಾಧ್ಯವಾಗುವಂತಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದ ಯುವಕ ಈಶ್ವರ್ ಇತ್ತೀಚೆಗೆ ಅಪಘಾತಕ್ಕೀಡಾಗಿದ್ದರು. ಅಪಘಾತದಲ್ಲಿ ಅವರ ‘ಬ್ರೈನ್ ಡೆಡ್‌’ ಆಗಿತ್ತು. ಆ ಯುವಕನ ಕೈ ಮತ್ತು ಕಾಲುಗಳ ಮೂಳೆಗಳನ್ನು ದಾನ ಮಾಡುವಂತೆ ವೈದ್ಯರು ಕುಟುಂಬಸ್ಥರ ಮನವೊಲಿಸಿದ್ದಾರೆ. ಯುವಕನ ಫೋಷಕರು ಆತನ ಮೂಳೆಗಳನ್ನು ಆಸ್ಪತ್ರೆಗೆ ದಾನ ಮಾಡಿದ್ದಾರೆ.

ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ರೋಗ ವಿಭಾಗದ ಮುಖ್ಯಸ್ಥ ಡಾ.ವಿಕ್ರಮ್ ಶೆಟ್ಟಿ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಯುವಕನ ಮೂಳೆಗಳನ್ನು ಸಂಗ್ರಹಿಸಲಾಗಿದೆ. ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 6 ಮಕ್ಕಳ ಕಾಲುಗಳಿಗೆ ಅಳವಡಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...