ಬೀದರ್ | ಪ್ರೀತಿಸಿದವನಿಂದಲೇ ಯುವತಿಯ ಕೊಲೆ; ಮೂವರ ಬಂಧನ

Date:

ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯಲ್ಲಿ ಕಳೆದ ವಾರ ನಡೆದಿದ್ದ 18 ವರ್ಷದ ಯುವತಿ ಭಾಗ್ಯಶ್ರೀಯ ಕೊಲೆ ಆರೋಪದ ಸಂಬಂಧ ಪೊಲೀಸ್‌ ಇಲಾಖೆ ತನಿಖೆ ಕೈಗೊಂಡಿದ್ದು, ಯುವತಿಯ ಪ್ರಿಯಕರನೇ ಕೊಲೆ ಮಾಡಿರುವುದು ತಾಂತ್ರಿಕ ಸಾಕ್ಷಾಧಾರಗಳಿಂದ ಖಚಿತವಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ‘ಭಾಗ್ಯಶ್ರೀ ತಂದೆ ಮೊದಲೇ ಕೊಲೆ ನಡೆದಿರುವ ಬಗ್ಗೆ ದೂರು ನೀಡಿದ್ದರು. ಪ್ರೀತಿಸಿ ಮದುವೆ ಮಾಡಿಕೊಳ್ಳದೆ ಯುವತಿ ಮೇಲೆ ಅತ್ಯಾಚಾರ ನಡೆಸಿ, ಕತ್ತು ಹಿಸುಕಿ, ಆಕೆಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದೆ’ ಎಂದು ಮಾಹಿತಿ ನೀಡಿದರು.

ಬಸವಕಲ್ಯಾಣ ಹಾಗೂ ಮಂಠಾಳ ಠಾಣೆ  ಸಿಪಿಐ ನೇತೃತ್ವದಲ್ಲಿ ಎರಡು ತಂಡ ರಚಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ಶಾಲಾ ಬಸ್‌ಗೆ ಸಾರಿಗೆ ಬಸ್‌ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು; ಹಲವರಿಗೆ ಗಾಯ

‘ಕೊಲೆಯ‌ ಪ್ರಮುಖ ಆರೋಪಿ ಅದೇ ಗ್ರಾಮದವನಾಗಿದ್ದು, ಈ ಕೃತ್ಯಕ್ಕೆ ಸಹಕಾರ ನೀಡಿದ್ದ ಆತನ ಇನ್ನಿಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಮೃತಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ಬಸವಕಲ್ಯಾಣ ನಗರ ಠಾಣೆಯಲ್ಲಿ ಎಸ್ಸಿ,ಎಸ್ಟಿ ಕಾಯ್ದೆ ಅನ್ವಯ ಹಾಗೂ ಅತ್ಯಾಚಾರ ಪ್ರಕರಣವೆಂದು ಪರಿಗಣಿಸಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ’ ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...