ಕೋಲಾರ: ಕಳೆದ ವಾರ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಭಾರತ್ ಮಂಟಪದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆಗೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಬಂಧನವನ್ನು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರೀದ್ ತೀವ್ರವಾಗಿ ಖಂಡಿಸಿ ಕೂಡಲೇ ಬಿಡುಗಡೆಗೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ದೇಶದಲ್ಲಿ ನರೇಂದ್ರ ಮೋದಿಯವರ ಅಣತೆಯಂತೆ ದೆಹಲಿ ಪೊಲೀಸರು ನಡೆದುಕೊಂಡಿದ್ದಾರೆ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನದ ಕ್ರಮದ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ ಕೂಡಲೇ ಯುವ ಕಾಂಗ್ರೆಸ್ ಮುಖಂಡರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಭಾರತ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ಇತರರು ಪ್ರತಿಭಟನೆ ನಡೆಸಿದ್ದಾರೆ ಅದನ್ನೇ ನೆಪ ಮಾಡಿಕೊಂಡು ಬಂಧಿಸಿದ್ದು ಸಂವಿಧಾನ ಬಾಹಿರವಾಗಿದ್ದು ಪ್ರತಿಭಟಿಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಅದನ್ನು ದಮನ ಮಾಡಲು ಮೋದಿ ಸರ್ಕಾರವು ಮುಂದಾಗಿದೆ ಸಾಮಾನ್ಯ ಜನರರ ಪರ ಧ್ವನಿ ಎತ್ತುವುದನ್ನು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಾಗಿದೆ ಎಂದರು.
ಇದನ್ನು ಓದಿದ್ದೀರಾ..?ಕುಂಬಾರ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಡಾ.ಕೆ.ನಾಗರಾಜ್ ನೇಮಕ
ದೇಶದಲ್ಲಿ ಯುವಕರ ಉದ್ಯೋಗ ಪರಿಸ್ಥಿತಿ ಗಂಭೀರವಾಗಿದೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂದು ಹೇಳಿದ ಮೋದಿ ಸರ್ಕಾರವು ಕಳೆದ 11 ವರ್ಷದಲ್ಲಿ ಎಷ್ಟು ಉದ್ಯೋಗ ಸೃಷಿಸಿದೆ ಮಾಹಿತಿ ಕೊಡಲಿ ಅಮೆರಿಕದೊಂದಿಗಿನ ಒಪ್ಪಂದವು ರೈತರು ಹಾಗೂ ಕಾರ್ಮಿಕರು ಸೇರಿದಂತೆ ಸಾಮಾನ್ಯ ವರ್ಗದ ಹಿತಾಸಕ್ತಿಗಳಿಗೆ ಹಾನಿ ತಂದಿದೆ ಇದರ ವಿರುದ್ದ ಧ್ವನಿ ಎತ್ತಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ ಎಂದು ಸೈಯದ್ ಆಫ್ರೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.





