ಮಲೆ ಮಹದೇಶ್ವರ ಬೆಟ್ಟ | ಚಿರತೆ ದಾಳಿಗೆ ಯುವಕ ಮೃತಪಟ್ಟ ಪ್ರಕರಣ; ರೈತ ಸಂಘದಿಂದ ರಸ್ತೆ ತಡೆ

Date:

ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕು ಮಲೆ ಮಹದೇಶ್ವರ ಬೆಟಕ್ಕೆ ಪಾದಯಾತ್ರೆ ಮೂಲಕ ತೆರಳುತಿದ್ದ ಯುವಕ ಪ್ರವೀಣ್ ಮೇಲೆ ಚಿರತೆ ದಾಳಿ ನಡೆಸಿದ ಪ್ರಕರಣ ಖಂಡಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ರಸ್ತೆ ತಡೆ ನಡೆಸಿದೆ.

ರಾಜ್ಯ ಸಮಿತಿ ಸದಸ್ಯರಾದ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಬುದುವಾರ ಸಂಜೆ ಪೊನ್ನಾಚಿ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ, ಅರಣ್ಯ ಇಲಾಖೆಯವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ದಿಕ್ಕಾರ ಕೂಗಿದರು. ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಮಾಡಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹಾಗಾಗಿ, ಬೇರೆ ಕಡೆಯಿಂದ ಚಿರತೆ ಮತ್ತು ಹುಲಿಗಳನ್ನು ತಂದು ಮಹದೇಶ್ವರ ಬೆಟ್ಟ ಅರಣ್ಯ ವಲಯಕ್ಕೆ ಬಿಡುತ್ತಿದ್ದಾರೆ. ಇದೇ ರೀತಿ ಮಾಡಿ ಮುಂದಿನ ದಿನಗಳಲ್ಲಿ ಭಕ್ತಾದಿಗಳು ಪಾದಯಾತ್ರೆ ಮಾಡುವುದಕ್ಕೆ ಅಡ್ಡಿಪಡಿಸಿ, ಕಾನೂನುಗಳನ್ನು ತರುತ್ತಾರೆ. ಹಾಗೆ, ಅರಣ್ಯದ ಒಳಗೆ ಯಾರು ಓಡಾಡಬಾರದು ಎಂಬುದು ಇವರುಗಳ ಅಜೆಂಡವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇವೆಲ್ಲವನ್ನೂ ಪೂರ್ವ ಯೋಜಿತವಾಗಿಯೇ ಮಾಡುತಿದ್ದು, ಒಟ್ಟಾರೆಯಾಗಿ ಕಾಡು ಪ್ರಾಣಿಗಳ ಹೆಸರಿನಲ್ಲಿ ಮಲೆ ಮಹದೇಶ್ವರ ಬೆಟ್ಟದ ಹಿಡಿತ ಸಾಧಿಸಲು ಹೊರಟಿದ್ದಾರೆ. ಹಾಗಾಗಿ, ಇಂತಹ ಅಧಿಕಾರಿಗಳ ನಡೆಗೆ ನಮ್ಮೆಲ್ಲರ ದಿಕ್ಕಾರ. ಸರ್ಕಾರಗಳು ಸಹ ತಮಗೆ ಏನು ತಿಳಿಯದಂತೆ ವರ್ತಿಸುತ್ತಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸುತ್ತಾರೆ. ಇಂತಹ ಸಂದರ್ಭಗಳಲಿ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಹಾಗು ರಾತ್ರಿ ವೇಳೆ ಸಂಚಾರದ ಕುರಿತಾಗಿ ಅರಿವು ಮೂಡಿಸಬೇಕು. ಇದೇನು ಮಾಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಲೆ ಮಹದೇಶ್ವರ ಬೆಟ್ಟ | ಚಿರತೆ ದಾಳಿಗೆ ಯುವಕ ಬಲಿ; 21 ರಿಂದ 24ರವರೆಗೆ ಕಾಲ್ನಡಿಗೆ, ದ್ವಿಚಕ್ರವಾಹನ ಸವಾರಿ ನಿರ್ಬಂಧ

ಚಿರತೆ ದಾಳಿಯಿಂದ ಮಂಡ್ಯ ಮೂಲದ ಪ್ರವೀಣ್ ಮೃತಪಟ್ಟಿದ್ದಾನೆ, ಇದರ ಹೊಣೆ ಹೊತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬೀಟ್ ಫಾರೆಸ್ಟರ್ ಭಾಸ್ಕರ್, ಎಎಸ್ಪಿ ಶಶಿಧರ್ ಭೇಟಿ ನೀಡಿ ಪ್ರತಿಭಟನಾಕಾರರ ಮಾತನ್ನು ಆಲಿಸಿ, ಸೂಕ್ತ ಕ್ರಮ ವಹಿಸಿ, ಸಂಬಂಧಪಟ್ಟವರಿಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು ಜಿಲ್ಲೆಯಾದ್ಯಂತ 18 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು; ಅನರ್ಹತೆಗೆ ಕಾರಣಗಳೇನು?

ಪ್ರತಿಭಟನೆಯಲ್ಲಿ ಚಂಗಡಿ ಕರಿಯಪ್ಪ, ಗುಂಡ್ಲುಪೇಟೆ ಮಹೇಶ್, ಬೇರಂಬಾಡಿ ಶಶಿ, ಚಾಮರಾಜನಗರ ಮೂಡ್ನಾಕೂಡು ನಿಜಗುಣ, ಪೊನ್ನಾಚಿ ರಾಜು ಹಾಗೂ ಪೊನ್ನಾಚಿ, ಅಸ್ತೂರಿನ ರೈತ ಸಂಘಟನೆಯ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...