ಮಂಡ್ಯ | ಸ್ಟೇಷನ್‌ನಲ್ಲೇ ಕಾನ್ಸ್‌ಟೇಬಲ್‌ ಕೆನ್ನೆಗೆ ಬಾರಿಸಿದ ಯುವಕ: ವಿಡಿಯೋ ವೈರಲ್

Date:

ತನ್ನ ಕಪಾಳಕ್ಕೆ ಹೊಡೆದ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಯುವಕನೊಬ್ಬ ಪೊಲೀಸ್‌ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಶನಿವಾರ ನಡೆದಿದೆ.

ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್ ಅವರ ಪುತ್ರ ಸಾಗರ್ (30) ಎಂಬಾತ ಪೊಲೀಸ್ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ ನಡೆಸಿದವ ಎನ್ನಲಾಗಿದೆ. ಪೊಲೀಸ್‌ ಕಾನ್ಸ್‌ಟೇಬಲ್‌ ಅಭಿಷೇಕ್ ಮೇಲೆ ಹಲ್ಲೆ ಮಾಡಿದ ಸಾಗರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನಿನ ವಿಚಾರವಾಗಿ ನಡೆದಿದ್ದ ಜಗಳದ ಸಂಬಂಧ ಲಕ್ಷ್ಮೀನಾರಾಯಣ ಎಂಬುವವರು ಸಾಗರ್ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆಯಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಠಾಣೆಯಲ್ಲಿ ಮತ್ತೆ ಸಾಗರ್, ಲಕ್ಷ್ಮೀನಾರಾಯುಣ್‌ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಕಾನ್ಸ್‌ಟೇಬಲ್‌ ಅಭಿಷೇಕ್, ಸಾಗರ್‌ನನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಕೋಪ ಗೊಂಡಿದ್ದ ಸಾಗ‌ರ್, ಪೊಲೀಸ್‌ ಕಾನ್ಸ್‌ಟೇಬಲ್‌ ಅಭಿಷೇಕ್ ಅವರ ಕೊರಳಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾನೆ.

ಕರ್ತವ್ಯದಲ್ಲೇ ಇದ್ದ ಪೊಲೀಸರುಗಳಾದ ಲಕ್ಷ್ಮೀ ಮತ್ತು ಆನಂದ್ ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಮುಂದಾಗಿದ್ದಾರೆ. ಆದರೆ ಸಾಗರ್, ನನ್ನ ವಿಚಾರಕ್ಕೆ ಬರಬೇಡಿ ಎಂದು ಲಕ್ಷ್ಮೀ ಮತ್ತು ಆನಂದ ಅವರಿಗೂ ಧಮ್ಕಿ ಹಾಕಿ, ಕುಡಿಯುವ ನೀರಿನ ಕ್ಯಾನ್ ಎತ್ತಿ ಬಿಸಾಡಿ ದಾಂಧಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ‌.

ಕಾನ್ಸ್‌ಟೇಬಲ್ ಅಭಿಷೇಕ್ ನೀಡಿದ ದೂರಿನ ಮೇಲೆ ಪೊಲೀಸರು ಆರೋಪಿ ಸಾಗರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...