ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

Date:

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ ಮೂಲಕ ಯುವಜನರು ಹಾಗೂ ರೈತರ ಏಳಿಗೆಯೇ ರಾಜ್ಯದ ಏಳಿಗೆ ಎಂಬುದನ್ನು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲು ಬೀದ‌ರ್‌ನಿಂದ ಬೆಂಗಳೂರು ವಿಧಾನಸೌಧದವರೆಗೂ 1,200 ಕಿಮೀ ದೂರ ಯುವಪರಿವರ್ತನೆ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಯಲ್ಲಪ್ಪ ಹೆಗಡೆ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿ ಗ್ರಾಮದ ಸಿದ್ರಾಮೇಶ್ವರ ದೇವಸ್ಥಾನದಲ್ಲಿ ಪರಮ ಪೂಜ್ಯ ಮಾದುಲಿಂಗ ಮಹಾರಾಜರು, ಲಕ್ಕಪ್ಪ ಮಹಾರಾಜರು, ರೈತ ಮುಖಂಡರಾದ ಮುತ್ತಪ್ಪ ಕೋಮಾರ, ಸಿದ್ದಪ್ಪ ಬಳಗಾನೂರ ಕಾರ್ಮಿಕ ಮುಖಂಡರಾದ ಈರನಗೌಡ ಪಾಟೀಲ, ಪ್ರಕಾಶ ಕಬ್ಬೂರ, ಮುಖಂಡರಾದ ಯಮನಪ್ಪ ಹೊರಟ್ಟಿ, ಈರನಗೌಡ ಪಾಟೀಲ, ರಮೇಶ ಜೀರಗಾಳ, ಮಲ್ಲಪ್ಪ ಸಿಂಗಾಡಿ, ಹೊನ್ನಪ್ಪ ಬಿರಡಿ, ಸುರೇಶ ಕಿವಡಿ, ರಮೇಶ ಹುಣಶಿಕಟ್ಟಿ ನೇತೃತ್ವದಲ್ಲಿ ಯುವ ಪರಿವರ್ತನೆ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು.

“ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಸರ್ಕಾರದ ಗಮನಕ್ಕೆ ತರಲು ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ, ಸರ್ವಧರ್ಮದ ಸರ್ವರೂ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆಯುವುದು ಯುವಪರಿವರ್ತನೆ ಯಾತ್ರೆಯ ಉದ್ದೇಶವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

ಪೂಜ್ಯ ಮಾದುಲಿಂಗ ಮಹಾರಾಜರು ಮತ್ತು ಲಕ್ಕಪ್ಪ ಮಹಾರಾಜರು ಈ ಯಾತ್ರೆ ಯಶಸ್ವಿಯಾಗಲಿ ಎಂದು ಆರ್ಶೀವದಿಸಿದರು.

ಈ ಯಾತ್ರೆಯ ಚಾಲನೆಯಲ್ಲಿ ಭೀಮ್ ಆರ್ಮಿ ಮುಖಂಡರಾದ ಶೇಖರ್ ಕಾಂಬಳೆ, ಆಸ್ಕರ್ ಸರಕಾವಸ್, ಅಡಿವೆಪ್ಪ ದಳವಾಯಿ, ಇಸ್ಮಾಯಿಲ್ ಕರೋಲ್, ಸದಾಶಿವ ಆಗೋಜಿ, ರಂಗಪ್ಪ ಪಾಟೀಲ್, ಮಹಾಲಿಂಗ ಮಾಯನ್ನವರ, ಸಂಜು ಹಡಕರ ಸೇರಿದಂತೆ ಇತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...