ಮಂಡ್ಯ| ಬಯೋ ಮೆಟ್ರಿಕ್ ಮೂಲಕ ಹಾಜರಾತಿ ಕಡ್ಡಾಯ; ಜಿ.ಪಂ. ಸಿಇಒ ತನ್ವೀರ್ ಆಸಿಫ್

Date:

ಸರಕಾರಿ ಕಚೇರಿಗಳಲ್ಲಿ ಅಧಿಕಾರಿ-ಸಿಬ್ಬಂದಿಗಳು ಬಯೋ ಮೆಟ್ರಿಕ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಹಾಗೂ ನಿಗದಿತ ಸಮಯಕ್ಕೆ ಹಾಜರಾಗಿ ಸಾರ್ವಜನಿಕರ ಕೆಲಸಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಅವರು ಮಂಡ್ಯ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರು ಆಗಸ್ಟ್ 2 ರಂದು ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲು ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿದರು.

ಗ್ರಾಮ ಪಂಚಾಯತ್‌ಗಳ ತೆರಿಗೆ ವಸೂಲಾತಿ, ಆಸ್ತಿಗಳ ಸಮೀಕ್ಷೆ, ಇ-ಸ್ವತ್ತು ಮತ್ತು ಐ.ಪಿ.ಜಿ.ಆರ್.ಎಸ್. ಅರ್ಜಿಗಳ ವಿಲೇವಾರಿ ಮಾಹಿತಿ ಪಡೆದು ಆದ್ಯತೆ ಮೇರೆಗೆ ಕಾಲಮಿತಿಯೊಳಗೆ ಇ-ಸ್ವತ್ತು ಹಾಗೂ ಸಾರ್ವಜನಿಕ ಕುಂದು ಕೊರತೆ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಜಿಟಲ್ ಗ್ರಂಥಾಲಯಗಳ ನಿರ್ವಹಣೆ, ಇಲಾಖಾ ವಿಚಾರಣೆ ವಿವರ, 14 ಮತ್ತು 15ನೇ ಹಣಕಾಸಿನ ಪ್ರಗತಿ ಪರಿಶೀಲಿಸಿದರು.

ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಸದರಿ ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯತ್‌ಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯತ್‌ಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಪಿ.ಡಿ.ಓ.ಗಳಿಗೆ ನಿರ್ದೇಶನ ನೀಡುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

1001137964

ಮಹಾತ್ಮಗಾಂಧಿ ನರೇಗಾ ಯೋಜನೆ, ಜಲ ಜೀವನ್ ಮಿಷನ್ ಯೋಜನೆ, ಸ್ವಚ್ಛ ಭಾರತ್ ಮಿಷನ್(ಗ್ರಾ), ಬಾಪೂಜಿ ಸೇವಾ ಕೇಂದ್ರದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲಿಸಿ ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿ ಗ್ರಾ.ಪಂ. ಪಿ.ಡಿ.ಓ.ಗಳ ಸಭೆಯನ್ನು ಮಾನ್ಯ ಸಚಿವರ ನಿರ್ದೇಶನದಂತೆ ಪ್ರತಿ ತಿಂಗಳ 4ನೇ ತಾರೀಖಿನಂದು ಸಭೆ ನಡೆಸಿ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲಿಸಿ, ಸಭಾ ನಡವಳಿ ಹಾಗೂ ಅನುಷ್ಠಾನ ವರದಿಯನ್ನು ಎರಡು ದಿನಗಳೊಳಗಾಗಿ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಸಂಜೀವಪ್ಪ, ಉಪ ಕಾರ್ಯದರ್ಶಿಗಳಾದ ಆನಂದ್, ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...