ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಮಂತ್ರಿ, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕಿ ಬೇಗಂ ಖಲೇದಾ ಜಿಯಾ ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.
ಖಲೇದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಹಾಗೂ ಹೃದಯ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಖಲೇದಾ ಜಿಯಾ ಅವರು 1991–1996 ಹಾಗೂ 2001–2006ರ ಅವಧಿಯಲ್ಲಿ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು. ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ರಾಜಕೀಯದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಶೇಖ್ ಹಸೀನಾ ಅವರ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿಯೂ ಆಗಿದ್ದರು.




