ಮೆಸ್ಸಿ ಕ್ರೀಡಾಂಗಣ ತೊರೆಯಲು ‘ಅಪ್ಪುಗೆ’ಯೇ ಕಾರಣ: ಆಯೋಜಕ

Date:

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ, ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಹಿರನಡೆದರು. ಅವರನ್ನು ಕೆಲವರು ಅಪ್ಪಿಕೊಂಡಿದ್ದರಿಂದ ಅವರು ಕೋಪಗೊಂಡು ಕ್ರೀಡಾಂಗಣ ತೊರೆದರು ಎಂದು ಕಾರ್ಯಕ್ರಮದ ಪ್ರಮುಖ ಆಯೋಜಕ ಸತಾದ್ರು ದತ್ತಾ ಹೇಳಿರುವುದಾಗಿ ವರದಿಯಾಗಿದೆ..

ಡಿಸೆಂಬರ್ 13 ರಂದು ಕೋಲ್ಕತ್ತಾದಲ್ಲಿ ಮೆಸ್ಸಿ ಅವರ ಪ್ರತಿಮೆ ಅನಾವರಣ ಮತ್ತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೆಸ್ಸಿಯನ್ನು ನೋಡಲು ಅಭಿಮಾನಿಗಳು ಸಾವಿರಾರು ರೂಪಾಯಿ ಹಣತೆತ್ತು, ಟಿಕೆಟ್ ಖರೀದಿಸಿ ಕ್ರೀಡಾಂಗಣಕ್ಕೆ ಬಂದಿದ್ದರು. ಆದರೆ, ಮೆಸ್ಸಿ ಅವರನ್ನು ಕೆಲವು ಪ್ರಭಾವಿಗಳು ಮತ್ತು ರಾಜಕಾರಣಿಗಳು ಸುತ್ತುವರಿದಿದ್ದರಿಂದ ಅವರನ್ನು ನೋಡಲಾಗದೆ,ಅಭಿಮಾನಿಗಳು ಆಕ್ರೋಶಸ ವ್ಯಕ್ತಪಡಿಸಿದ್ದರು. ಕ್ರೀಡಾಂಗಣದ ಕುರ್ಚಿಗಳನ್ನು ಮುರಿದು, ಹಾನಿ ಮಾಡಿದ್ದರು. ಅಂದಿನ ಅವ್ಯವಸ್ಥೆ ಕುರಿತು ತನಿಖೆ ನಡೆಸಲು ಸರ್ಕಾರವು ಎಸ್‌ಐಟಿ ರಚಿಸಿದೆ.

ಪ್ರಕರಣದ ತನಿಖೆ ಆರಂಭಿಸಿರುವ ಎಸ್‌ಐಟಿ, ಪ್ರಮುಖ ಆಯೋಜಕ ಸುತಾದ್ರು ದತ್ತಾ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದೆ. ಈ ವೇಳೆ, “ಕೆಲವರು ಮೆಸ್ಸಿ ಅವರನ್ನು ಟಚ್ ಮಾಡಿದ್ದರಿಂದ ಮತ್ತು ಅಪ್ಪಿಕೊಂಡಿದ್ದರಿಂದ ಅವರು ಆಕ್ರೋಶಗೊಂಡು ಅಲ್ಲಿಂದ ತೆರಳಿದರು” ಎಂದು ದತ್ತಾ ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೆಸ್ಸಿ ಅವರಿಗೆ ತಮ್ಮ ಬೆನ್ನನ್ನು ಮುಟ್ಟುವುದು ಅಥವಾ ಅಪ್ಪಿಕೊಳ್ಳುವುದು ಇಷ್ಟವಿಲ್ಲ. ಈ ಬಗ್ಗೆ ಅವರೊಂದಿಗೆ ಬಂದಿದ್ದ ವಿದೇಶಿ ಭದ್ರತಾ ಅಧಿಕಾರಿಗಳು ಮುಂಚಿತವಾಗಿಯೇ ತಿಳಿಸಿದ್ದರು” ಎಂದು ದತ್ತಾ ವಿವರಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...