ಉತ್ತರಿಸಲಾಗದೆ ಸಂಸತ್ತಿನಿಂದ ಓಡಿ ಹೋಗುವುದು ನಾಟಕ: ಮೋದಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

Date:

ಡಿಸೆಂಬರ್ 1ರಿಂದ ಸಂಸತ್‌ ಚಳಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನಕ್ಕೂ ಮುನ್ನ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ ‘ಸದನ ಇರುವುದು ಗದ್ದಲ ಸೃಷ್ಟಿಸಲು ಅಲ್ಲ. ನಾಟಕ ಮಾಡಲು ಸಾಕಷ್ಟು ಸ್ಥಳಗಳಿವೆ’ ಎಂದಿದ್ದರು. ಅವರ ಹೇಳಿಕೆಯ ವಿರುದ್ಧ ಪ್ರತಿದಾಳಿ ನಡೆಸಿರುವ ಕಾಂಗ್ರೆಸ್‌ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ, “ಸಂಸತ್ತಿನಲ್ಲಿ ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಧಿವೇಶನದಿಂದ ಓಡಿ ಹೋಗುವುದು, ಚರ್ಚೆಯನ್ನು ತಪ್ಪಿಸುವುದು ನಿಜವಾದ ನಾಟಕ” ಎಂದಿದ್ದರೆ.

ಎಕ್ಸ್‌ನಲ್ಲಿ ಮೋದಿಗೆ ತಿರುಗೇಟು ನೀಡಿರುವ ಪ್ರಿಯಾಂಕಾ ಗಾಂಧಿ, “ಹಣದುಬ್ಬರ ಮತ್ತು ಮಾಲಿನ್ಯದಂತಹ ಸಾರ್ವಜನಿಕ ವಿಷಯಗಳ ಕುರಿತು ಚರ್ಚೆಗಳನ್ನು ತಪ್ಪಿಸುವುದು ನಿಜವಾದ ನಾಟಕ. ಸಂಸತ್ತಿನಲ್ಲಿ ಸಮಸ್ಯೆಗಳನ್ನು ಎತ್ತುವುದು ನಾಟಕವಲ್ಲ” ಎಂದಿದ್ದಾರೆ.

“ಚುನಾವಣಾ ಪರಿಸ್ಥಿತಿ, ಮಾಲಿನ್ಯವು ದೇಶದ ಪ್ರಮುಖ ವಿಷಯವಾಗಿದೆ. ಅದನ್ನು ಚರ್ಚಿಸೋಣ. ಸಂಸತ್ತು ಇರುವುದು ಯಾವುದಕ್ಕಾಗಿ? ಇದು ನಾಟಕವಲ್ಲ. ಸಮಸ್ಯೆಗಳ ಕುರಿತು ಮಾತನಾಡುವುದು ಮತ್ತು ಪ್ರಶ್ನೆಗಳನ್ನು ಎತ್ತುವುದು ನಾಟಕವಲ್ಲ. ಪ್ರಜಾಪ್ರಭುತ್ವದ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡದಿರುವುದು ಮತ್ತು ಅವುಗಳನ್ನು ಚರ್ಚಿಸದಿರುವುದು ನಾಟಕ” ಎಂದು ಮೋದಿ ವಿರುದ್ಧ ಗುಡುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕರಿಗೆ ಮುಖ್ಯವಾದ ವಿಷಯಗಳ ಕುರಿತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿರುವ ಚರ್ಚೆಗಳನ್ನು ಮೋದಿ ಅವರ ನಾಟಕ ತಡೆಯುತ್ತಿದೆ” ಎಂದು ಟೀಕಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...