ಹುಬ್ಬಳ್ಳಿ | 47 ಕುಟುಂಬಗಳು ಬೀದಿ ಪಾಲು

Date:

ಹುಬ್ಬಳ್ಳಿಯಲ್ಲಿ ಸ್ಥಳೀಯ ಆಡಳಿತವು ಒತ್ತುವರಿ ತೆರವು ಹೆಸರಿನಲ್ಲಿ 47 ಮನೆಗಳನ್ನು ಧ್ವಂಸಗೊಳಿಸಿದ್ದು, ಹಲವಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮನೆಗಳನ್ನು ನೆಲಸಮ ಮಾಡಿರುವುದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ‌ ಪಾಲಿಕೆ ಹೇಳಿಕೊಂಡಿದೆ.

ಗುರುವಾರ ಸಂಜೆ, ಹುಬ್ಬಳಿಯ ಉದಯನಗರಕ್ಕೆ ಜೆಸಿಬಿಗಳೊಂದಿಗೆ ಬಂದ ಅಧಕಾರಿಗಳು, 47 ಮನೆಗಳನ್ನು ಕಡೆವಿದ್ದಾರೆ. ಆ ಮನೆಗಳನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಹೇಳಿದ್ದಾರೆ. ಆದರೆ, ಆ ಭೂಮಿಯನ್ನು ಖರೀದಿಸಿ ಮನೆ ಕಟ್ಟಿದ್ದವರ ಕನಸು ಭಗ್ನವಾಗಿದೆ. ಮಾತ್ರವಲ್ಲದೆ, ತೀವ್ರ ನಷ್ಟಕ್ಕೂ ಗುರಿಯಾಗಿದ್ದಾರೆ.

ಮನೆ ಕಳೆದುಕೊಂಡ 47 ಕುಟುಂಬಗಳು ಉದಯನಗರದಲ್ಲಿ ನಿವೇಶನ ಖರೀದಿಸಿಯೇ ಮನೆ ಕಟ್ಟಿದ್ದರು. ಆದರೆ, ಆ ನಿವೇಶನಗಳನ್ನು ಮೋಸದ ಜಾಲವು ಅಕ್ರಮವಾಗಿ ಮಾರಾಟ ಮಾಡಿತ್ತು. ಆ ಜಾಲವನ್ನು ನಂಬಿದ್ದ ಕುಟುಂಬಗಳು ಸರಿಯಾದ ದಾಖಲೆಗಳನ್ನು ಪರಿಶೀಲಿಸದೆ, ನಿವೇಶನ ಖರೀದಿಸಿ, ಮನೆ ನಿರ್ಮಿಸಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಭೂಮಿಯಲ್ಲಿ ಮನೆ ಕಟ್ಟಿರುವುದನ್ನು ಪ್ರಶ್ನಿಸಿ ಜಮೀನಿನ ಮೂಲ/ನೈಜ ಮಾಲೀಕ ರಾಮರಾವ್ ಸಬನಿಸ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ ಭೂಮಿಯನ್ನು ಸಿಕಂದರ್ ಎಂಬಾತ ತನ್ನದೇ ಭೂಮಿಯೆಂದು ಸುಳ್ಳು ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಾನೆ. ತಮ್ಮ ಭೂಮಿಯನ್ನು ತಮಗೆ ಬಿಡಿಸಿಕೊಡಬೇಕೆಂದು ಮನವಿ ಮಾಡಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿದಾರ ರಾಮರಾವ್ ಸಬನಿಸ್ ಅವರ ಪರವಾಗಿ ತೀರ್ಪು ನೀಡಿತು. ಪೊಲೀಸ್ ಬಂದೋಬಸ್ತ್‌ನಲ್ಲಿ ಜಾಗವನ್ನು ತೆರವುಗೊಳಿಸಿ, ರಾಮರಾವ್‌ಗೆ ಹಸ್ತಾಂತರಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿತ್ತು.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...