ಬಿಜೆಪಿಯ ಯೋಗೀಶ್ ಗೌಡ ಕೊಲೆ‌ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೈಲೇ ಗತಿ

Date:

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ‌ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ವಿಜಯ್ ಕುಲಕರ್ಣಿ ಅವರ ಜೈಲುವಾಸ ಮುಂದುವರೆದಿದೆ.

2016ರ ಜೂನ್‌ 15ರಂದು ಯೋಗೀಶ್ ಗೌಡ ಹತ್ಯೆಯಾಗಿತ್ತು. ಪ್ರಕರಣದ ತನಿಖೆ‌ ನಡೆಸಿದ್ದ ಸಿಬಿಐ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಸೇರಿಸಿ, ಬಂಧಿಸಿತ್ತು. ಬಳಿಕ, ವಿನಯ್ ಕುಲಕರ್ಣಿ ಜಾಮೀನು ಪಡೆದು ಹೊರ ಬಂದಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಪ್ರವೇಶದ ನಿರ್ಬಂಧ ನಡುವೆಯೂ ಧಾರವಾಡದಿಂದ ಸ್ಪರ್ಧಿಸಿ, ಗೆದ್ದಿದ್ದರು.

ಆದರೆ, ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರಿಂದ, 2025ರ ಜೂನ್‌ 13ರಂದು ಕಾಂಗ್ರೆಸ್ ಶಾಸಕ ಮತ್ತೆ ಜೈಲು ಸೇರಬೇಕಾಯಿತು. ಬಳಿಕ, ಜಾಮೀನು ಕೋರಿ ಮತ್ತೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅವರ ಅರ್ಜಿಯನ್ನು ತಿರಸ್ಕರಿಸಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣದ 15ನೇ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರು ಸಾಕ್ಷಿಗಳ ಮೇಲೆ‌ ಒತ್ತಡ ಹಾಕಿದ್ದಾರೆ ಎಂಬ ಆರೋಪದ ಕಾರಣಕ್ಕಾಗಿ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ ಎಂದು ವರದಿಯಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...