ದಲಿತ ಸಿಎಂ ಬೇಡಿಕೆ: ದೆಹಲಿ ಕಾಂಗ್ರೆಸ್‌ ಕಚೇರಿ ಎದುರು ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

Date:

ಕರ್ನಾಟಕದಲ್ಲಿ ದಲಿತ ಸಮುದಾಯದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು.ಗೃಹ ಸಚಿವರಾಗಿರುವ ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಪರಮೇಶ್ವರ್ ಬೆಂಬಲಿಗರು ದೆಹಲಿಯ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಇಲ್ಲವೆಂದು ಹೇಳಲಾಗುತ್ತಿದ್ದರೂ, ಮುಖ್ಯಮಂತ್ರಿ ಹುದ್ದೆ ಬದಲಾವಣೆಯ ಚರ್ಚೆ ಮುಂದುವರೆದೇ ಇದೆ. ಮಾಧ್ಯಮಗಳು ಮತ್ತು ವಿಪಕ್ಷಗಳು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೆಚ್ಚು ಮಾತನಾಡುತ್ತಿವೆ. ಇದೇ ಸಮಯದಲ್ಲಿ, ಪರಮೇಶ್ವರ್ ಬೆಂಬಲಿಗರು ದೆಹಲಿ ಹೈಕಮಾಂಡ್ ಕದ ತಟ್ಟಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಪರಮೇಶ್ವರ್ ಬೆಂಬಲಿಗರು, “ಕರ್ನಾಟಕಲ್ಲಿ ನಾಯಕತ್ವ ಬದಲಾವಣೆ ಮಾಡುವುದಾದರೆ, ದಲಿತ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಬೇಕು. ಅದರಲ್ಲೂ, ಗೃಹ ಸಚಿವ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲಿತ ಸಮುದಾಯವು ದಶಕಗಳಿಂದ ಕಾಂಗ್ರೆಸ್‌ಗೆ ಬೆಂಬಲವಾಗಿ ನಿಂತಿದೆ. ದಲಿತ ನಾಯಕರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ನೀಡಬೇಕು. 2013ರಲ್ಲಿ ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್‌ 122 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಲಿಲ್ಲ. ಈ ಬಾರಿಯೂ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಗೆಲ್ಲುವಲ್ಲಿ ದಲಿತ ಸಮುದಾಯದ ಬೆಂಬಲ ಕಾರಣ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಿ, ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...