ಮಹಿಳೆಯೊಬ್ಬರನ್ನು ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ಅಧಿಕಾರಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಅಮೆರಿಕದ ಮಿನಿಸೋಟಾ ರಾಜ್ಯದ ಮಿನಿಯಾಪೊಲಿಸ್‌ನಲ್ಲಿ ನಡರದಿದೆ. ಘಟನೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಕೃತ್ಯವನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ‘ಇದು ಆತ್ಮ ರಕ್ಷಣೆಯ ಕ್ರಮ’ ಎಂದಿದ್ದಾರೆ.
ಹತ್ಯೆಗೀಡಾದ ಮಹಿಳೆಯನ್ನು 37 ವರ್ಷದ ರಿನೀ ನಿಕೊಲೆ ಗುಡ್ ಎಂದು ಗುರುತಿಸಲಾಗಿದೆ. ಅವರು ಕಾರಿನಲ್ಲಿ ತೆರಳುತ್ತಿದ್ದಾರೆ, ಅವರ ಕಾರನ್ನು ಐಸಿಇ ಅಧಿಕಾರಿಗಳು ಸುತ್ತುವರಿದಿದ್ದಾರೆ. ಈ ವೇಳೆ, ರಿನೀ ಅವರು ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಅವರ ಮೇಲೆ ಅಧಿಕಾರಿಯೊಬ್ಬರು ಗುಂಡು ಹಾರಿಸಿ, ಹತ್ಯೆಗೈದಿದ್ದಾರೆ.
ಘಟನೆಯ ವಿರುದ್ಧ ಅಮೆರಿಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಆದಾಗ್ಯೂ, ಘಟನೆಯನ್ನು ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. ‘”ರಿನೀ ವಲಸೆ ಅಧಿಕಾರಿಯನ್ನು ಕೊಲ್ಲಲು ಪ್ರಯತ್ನಿಸಿದ್ದಾರೆ. ಆ ಸಮಯದಲ್ಲಿ, ಅಧಿಕಾರಿ ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ” ಎಂದಿದ್ದಾರೆ.




