ಜಾರ್ಖಂಡ್‌ನ ಹಜಾರಿಬಾಗ್‌ನ ಹಬೀಬ್ ನಗರದಲ್ಲಿ ಭೀರಕ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಬೀಬ್ ನಗರದ ಖಾಲಿ ಪ್ರದೇಶದಲ್ಲಿ ಬೆಳೆದಿದ್ದ ಪೊದೆಗಳನ್ನು ತೆಗೆವುಗೊಳಿಸುತ್ತಿದ್ದ ಸಮಯದಲ್ಲಿ ಏಕಾಏಕಿ ಸ್ಪೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಪೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಫೋಟ ಸಂಭವಿಸಿದ ಸ್ಥಳವನ್ನು ಸೀಲ್ ಮಾಡಲಾಗಿದ್ದು, ಯಾರೂ ಸ್ಥಳಕ್ಕೆ ಹೋಗಬಾರದೆಂದು ಪೊಲೀಸರು ಸೂಚಿಸಿದ್ದಾರೆ. ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ(FSL) ತಂಡವು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ.




