ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್​ನಲ್ಲೇ ಸಾರಿಗೆ ನೌಕರ ಆತ್ಮಹತ್ಯೆ

Date:

ಕೆಎಸ್‌ಆರ್‌ಟಿಸಿಯಲ್ಲ ಮೆಕ್ಯಾನಿಕ್‌ ನೌಕರನಾಗಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಸಾರಿಗೆ ಬಸ್‌ನಲ್ಲಿಯೇ ನೇಟು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಎನ್‌ಡಬ್ಲ್ಯೂಆರ್‌ಟಿಸಿ ಡಿಪೋ-1ರಲ್ಲಿ ನಡೆದಿದೆ. ಮೃತನನ್ನು ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಅವರು ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದಾರೆ. ಮೇಲಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕೇಶವ ಅವರು ಕೆಲ ದಿನಗಳಿಂದ ಬೆನ್ನು ನೋವಿಗೆ ತುತ್ತಾಗಿದ್ದರು. ಕೆಲವು ದಿನಗಳವರೆಗೆ ತಮ್ಮ ಕೆಲಸವನ್ನು ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ ಮನವಿ ಮಾಡಿದ್ದರು. ಆದರೂ, ಅವರನ್ನು ಅಧಿಕಾರಿಗಳು ಪಂಚರ್ ಹಾಕುವ ವಿಭಾಗಕ್ಕೆ ಬದಲಾಯಿಸಿ, ನಿಯೋಜಿಸಿದ್ದರು. ಇದರಿಂದ ನೊಂದ ಕೇಶವ ಅವರು ಕೆಲಸದ ಸ್ಥಳದಲ್ಲಿಯೇ ಬಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...