ಟ್ರಂಪ್ ಸುಂಕ 15%ಗೆ ಏರಿಕೆ!

Date:

ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು ಅಮೆರಿಕ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ಈ ಬಳಿಕ, ಸುಂಕವನ್ನು 10%ಗೆ ನಿಗದಿ ಮಾಡುವುದಾಗಿ ಹೇಳಿದ್ದ ಟ್ರಂಪ್, ಇದೀಗ ಸುಂಕವನ್ನು 15%ಗೆ ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. ಇದು, ಅಂತಾರಾಷ್ಟ್ರೀಯವಾಗಿ ಕಳವಳ ಹುಟ್ಟುಹಾಕಿದೆ.

ತಮ್ಮ ‘ಟ್ರುತ್’ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್, “ವ್ಯಾಪಾರ ಕಾಯ್ದೆಯ ಸೆಕ್ಷನ್ 122ರ ಅಡಿಯಲ್ಲಿ ಅಧ್ಯಕ್ಷರು 15%ವರೆಗೆ ಸುಂಕವನ್ನು ವಿಧಿಸುವ ಅಧಿಕಾರ ಹೊಂದಿರುತ್ತಾರೆ. ಇದೇ ಅವಕಾಶದ ಅಡಿಯಲ್ಲಿ ಜಾಗತಿಕ 15% ಸುಂಕ ವಿಧಿಸುತ್ತೇನೆ” ಎಂದು ಹೇಳಿದ್ದಾರೆ.

“ಅಮೆರಿಕವು ದೊಡ್ಡ ಪ್ರಮಾಣದ ‘ಬ್ಯಾಲೆನ್ಸ್ ಆಫ್ ಪೇಮೆಂಟ್’ ಕೊರತೆಯನ್ನು ಎದುರಿಸುತ್ತಿದೆ. ಇದನ್ನು, ನಿಭಾಯಿಸಲು ಸುಂಕ ವಿಧಿಸುವುದು ಅನಿವಾರ್ಯ. ಕೆಲವೇ ತಿಂಗಳುಗಳಲ್ಲಿ ಕಾನೂನುಬದ್ಧವಾಗಿ ಅನುಮತಿಸಲಾದ ಹೊಸ ಸುಂಕವನ್ನು ಜಾರಿಗೊಳಿಸಲಾಗುತ್ತದೆ” ಎಂಧು ಹೇಳಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...

    ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ

    ಬೆಂಗಳೂರು ನಗರದ ಹಲವೆಡೆ ಫೆಬ್ರವರಿ 20 (ಶುಕ್ರವಾರ) ಹಾಗೂ 21ರಂದು (ಶನಿವಾರ)...