ಗೋವಾದ ನೈಟ್ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 23 ಮಂದಿ ಜೀವಂತ ಸುಟ್ಟುಹೋಗಿದ್ದಾರೆ. ಉತ್ತರ ಗೋವಾದ ಅರ್ಪೋರಾ ಪ್ರದೇಶದ ಬಾಗಾ ಬೀಜ್ ಬಳಿಯ ನೈಟ್ ಕ್ಲಬ್ ‘ಬಿರ್ಚ್ ಬೈ ರೋಮಿಯೋ ಲೇನ್’ನಲ್ಲಿ ಘಟನೆ ನಡೆದಿದೆ.
ಕ್ಲಬ್‌ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ದುರಂತ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕ್ಲಬ್ ಸಿಬ್ಬಂದಿ ಮತ್ತು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ವಾಹನಗಳನ್ನು ನಿಯೋಜಿಸಲಾಗಿದ್ದು, ಭಾನುವಾರ ಬೆಳಗಿನ ಜಾವದವರೆಗೂ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




