ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

Date:

ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹಾಜರಾಗದ ಪತಂಜಲಿ ಸಂಸ್ಥಾಪಕ, ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಲಾಗಿದೆ.

ಬಾಬಾ ರಾಮ್‌ದೇವ್ ಮತ್ತು ಅವರ ಸಹಚರ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳದ ಪಾಲಕ್ಕಾಡ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಭಾನುವಾರ ಬಂಧನ ವಾರೆಂಟ್ ಜಾರಿ ಮಾಡಿದೆ.

ಪತಂಜಲಿ ಆಯುರ್ವೇದ ಉತ್ಪನ್ನಗಳ ಭಾಗವಾಗಿರುವ ದಿವ್ಯಾ ಫಾರ್ಮಸಿ ವಿರುದ್ಧ ಔಷಧ ಇನ್‌ಸ್ಪೆಕ್ಟರ್‌ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ದಿವ್ಯಾ ಫಾರ್ಮಿಸಿಯ ಉತ್ಪನ್ನಗಳ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಾರೆ ಎಂದು ರಾಮ್‌ದೇವ್ ಮತ್ತು ಬಾಲಕೃಷ್ಣರನ್ನು ಆರೋಪಿಗಳನ್ನಾಗಿ ಹೆಸರಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

ಟ್ರಂಪ್ ಸುಂಕ 15%ಗೆ ಏರಿಕೆ!

ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

ಇಂದಿನಿಂದ ಒಂದೆಡೆ ರಂಗೋತ್ಸವ

ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...