ಅಫ್ಘಾನಿಸ್ತಾನದಲ್ಲಿ ಭೂಕಂಪ: 7 ಮಂದಿ ಸಾವು

Date:

ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಷರೀಫ್ ನಗರದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಸುಮಾರು 150 ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಸುಮಾರು 523,000 ಜನಸಂಖ್ಯೆಯನ್ನು ಹೊಂದಿರುವ ಮಜಾರ್-ಎ ಷರೀಫ್ ಬಳಿ 28 ಕಿಮೀ (17.4 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. “ಇಂದು ಬೆಳಿಗ್ಗೆ ಭೂಕಂಪವಾಗಿದ್ದು 7 ಮಂದಿ ಮೃತಪಟ್ಟಿದ್ದಾರೆ. 150 ಮಂದಿ ಗಾಯಗೊಂಡಿದ್ದು ಅವರನ್ನು ಆರೋಗ್ಯ ಕೇಂದ್ರಗಳಿಗೆ ವರ್ಗಾಯಿಸಲಾಗಿದೆ” ಎಂದು ಮಜಾರ್-ಎ ಷರೀಫ್ ಬಳಿಯ ಪರ್ವತ ಉತ್ತರ ಪ್ರಾಂತ್ಯದ ಸಮಂಗನ್‌ನಲ್ಲಿರುವ ಆರೋಗ್ಯ ಇಲಾಖೆಯ ವಕ್ತಾರ ಸಮೀಮ್ ಜೋಯಂಡಾ ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...